ಲಖೀಂಪುರ ಖೇರಿ: ‘ಆಲ್ಟ್ ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಲಖೀಂಪುರ ಖೇರಿ ಜಿಲ್ಲೆಯಹೆಚ್ಚುವರಿ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಎಸಿಜೆಎಂ) ನ್ಯಾಯಾಲಯ ವಾರೆಂಟ್ ಹೊರಡಿಸಿದೆ.

‘ಕಳೆದ ವರ್ಷ ನವೆಂಬರ್ನಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಕುರಿತಾದ ವಿಚಾರಣೆಗಾಗಿ ಇದೇ 11ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ವಾರೆಂಟ್ ಪ್ರತಿಯನ್ನು ಜುಬೈರ್ ಅವರಿಗೆ ಶುಕ್ರವಾರವೇ ತಲುಪಿಸಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಸಿಂಗ್ ಶನಿವಾರ ಹೇಳಿದ್ದಾರೆ.

‘ಜುಬೈರ್ ತಮ್ಮ ಟ್ವೀಟ್ಗಳ ಮೂಲಕ ಸಮಾಜದಲ್ಲಿ ದ್ವೇಷ ಬಿತ್ತುವ ಹಾಗೂ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿಯೊಂದರ ವರದಿಗಾರ ಆಶಿಶ್ ಕತಿಯಾರ್ ದೂರು ನೀಡಿದ್ದರು. ಅದರ ಆಧಾರದಲ್ಲಿ 2021ರ ನವೆಂಬರ್ 25ರಂದು ಪ್ರಕರಣ ದಾಖಲಿಸಲಾಗಿತ್ತು’ ಎಂದು ಮೊಹಮ್ಮದಿ ಪೊಲೀಸ್ ಠಾಣೆಯ ಅಧಿಕಾರಿ ಅಂಬರ್ ಸಿಂಗ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.