ಬೆಂಗಳೂರು: ಕೇರಳದ ವಯನಾಡ್ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ನಾಮಪತ್ರ ಸಲ್ಲಿಸಿದರು.

ಈ ವೇಳೆ ಅವರಿಗೆ ಪ್ರಮುಖವಾಗಿ ಸಾಥ್ ಕೊಟ್ಟವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು.

ಕಲ್ಪೇಟಾದಲ್ಲಿ ನಡೆದ ರೋಡ್ ಶೋನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಜೊತೆ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಈ ವೇಳೆ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ವಯನಾಡಿನಲ್ಲಿ ರಾಹುಲ್ ಗಾಂಧಿ ಅವರು ಆರಂಭಿಸಿದ ಅಭಿವೃದ್ಧಿ ಕಾರ್ಯಗಳನ್ನು ಮುನ್ನಡೆಸಿಕೊಂಡು ಹೋಗಲು ಪ್ರಿಯಾಂಕಾ ಅವರು ಅತ್ಯಂತ ಸಮರ್ಥರಿದ್ದಾರೆ ಎಂದು ಹೇಳಿದರು.

ಪ್ರಿಯಾಂಕಾ ಗಾಂಧಿ ಅವರು ಭರ್ಜರಿ ಬಹುಮತದಿಂದ ವಯನಾಡು ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ. ಬಿಜೆಪಿ ನಮ್ಮ ಸೈದ್ಧಾಂತಿಕ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದರು.

ವಯನಾಡ್ ಉಪಚುನಾವಣೆಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ನ. 23ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.