ತಿರುವನಂತಪುರ: ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೆರಿ ಅವರನ್ನು ಅಭ್ಯರ್ಥಿಯಾಗಿ ಎಲ್ಡಿಎಫ್ ಘೋಷಣೆ ಮಾಡಿದೆ.
.Wayanad Bypoll | ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಅಖಾಡಕ್ಕೆ ವೇದಿಕೆ ಸಜ್ಜು.
ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯಿ ವಿಶ್ವಂ ಅವರು ಗುರುವಾರ ಈ ಘೋಷಣೆ ಮಾಡಿದ್ದಾರೆ.

ಈ ಹಿಂದೆ ಕೋಯಿಕ್ಕೋಡ್ನ ನಾದಪುರಂ ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದರು. ಕೃಷಿ ವಲಯದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ ಮನೆ ಮಾತಾಗಿದ್ದರು.
.Wayanad Landslides | ಪುನರ್ವಸತಿಗೆ ತಿಂಗಳ ವೇತನ ದೇಣಿಗೆ ನೀಡಿದ ರಾಹುಲ್ ಗಾಂಧಿ.
2014ರಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಎಂ.ಐ ಶಾನವಾಸನ್ ಅವರಿಗೆ ತೀವ್ರ ಪೈಪೋಟಿ ನೀಡಿದ್ದರು. 20 ಸಾವಿರ ಮತಗಳ ಅಂತರಿಂದ ಸೋಲನುಭವಿಸಿದ್ದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ಈ ಸ್ಥಾನಕ್ಕೆ ಕಾಂಗ್ರೆಸ್ ಈಗಾಗಲೇ ಪ್ರಿಯಾಂಕಾ ಗಾಂಧಿಯವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.
.Wayanad Landslides | ₹2,000 ಕೋಟಿ ಪರಿಹಾರ ಒದಗಿಸಲು ಕೇಂದ್ರಕ್ಕೆ ವಿಜಯನ್ ಮನವಿ.
ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಬಳಿಕ ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.

ನವೆಂಬರ್ 13ರಂದು ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
.ಭೀಕರ ಭೂಕುಸಿತ ಸಂಭವಿಸಿದ್ದರೂ ವಯನಾಡ್–ಕೋಯಿಕ್ಕೋಡ್ ಸುರಂಗ ರಸ್ತೆಗೆ ಕೇರಳ ನಿರ್ಧಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.