ವಯನಾಡ್: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸಿರುವ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ಮುಕ್ತಾಯವಾಗಿದೆ.

ಚುನಾವಣಾ ಆಯೋಗದ ಅಂಕಿ–ಅಂಶದ ಪ್ರಕಾರ ಸಂಜೆ 5ರ ಹೊತ್ತಿಗೆ ಶೇ 60.79 ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಅಲ್ಲಲ್ಲಿ ಸಣ್ಣಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

14 ಲಕ್ಷಕ್ಕೂ ಅಧಿಕ ಮತದಾರರು ಇರುವ ಈ ಕ್ಷೇತ್ರದಲ್ಲಿ 1,354 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ಈ ಕ್ಷೇತ್ರ ತೆರವಾಗಿತ್ತು. ಅವರು, ಇದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್ಬರೇಲಿಯಿಂದ ಸ್ಪರ್ಧಿಸಿ, ಎರಡೂ ಕಡೆ ಗೆದ್ದಿದ್ದರು. ಬಳಿಕ ರಾಯ್ಬರೇಲಿಯನ್ನು ಉಳಿಸಿಕೊಂಡಿದ್ದರು.

ಹೀಗಾಗಿ, ವಯನಾಡ್ನಲ್ಲಿ ಸ್ಪರ್ಧಿಸುವ ಮೂಲಕ ಪ್ರಿಯಾಂಕಾ ಅವರು ಚುನಾವಣಾ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದಾರೆ.
.LIVE | ಉಪಚುನಾವಣೆ: ಚನ್ನಪಟ್ಟಣ– ಶೇ 88.80; ಶಿಗ್ಗಾವಿ– ಶೇ 80.48; ಸಂಡೂರು– ಶೇ 76.24 ಮತದಾನ .ಮತ ಚಲಾಯಿಸಿ; ಒಗ್ಗಟ್ಟಾಗಿ ಭವಿಷ್ಯ ನಿರ್ಮಿಸೋಣ: ವಯನಾಡ್ ಜನತೆಗೆ ಪ್ರಿಯಾಂಕಾ ಕರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.