ಚೂರಲ್‌ಮಲ ಸರ್ಕಾರಿ ಶಾಲೆಯ ಆವರಣ –ಪ್ರಜಾವಾಣಿ ಚಿತ್ರ/ ಫಕ್ರುದ್ದೀನ್ ಎಚ್.
ದುರಂತಕ್ಕೂ ಮೊದಲು ಚೂರಲ್‌ಮಲ ಸರ್ಕಾರಿ ಶಾಲೆಯಲ್ಲಿ ಪ್ರದರ್ಶನಗೊಂಡ ಮಕ್ಕಳ ಪ್ರತಿಭೆ –ಪ್ರಜಾವಾಣಿ ಚಿತ್ರ/ ಫಕ್ರುದ್ದೀನ್ ಎಚ್.
ಚೂರಲ್‌ಮಲ ಸರ್ಕಾರಿ ಶಾಲೆಯ ಆವರಣ –ಪ್ರಜಾವಾಣಿ ಚಿತ್ರ/ ಫಕ್ರುದ್ದೀನ್ ಎಚ್.
ಸುಂದರ ವಾತಾವಣದಲ್ಲಿ ಕಲಿಯಲು ಹಿತವಾಗುತ್ತಿತ್ತು. ನಾನು 8ನೇ ತರಗತಿಯಲ್ಲಿದ್ದೆ. ಮೂವರು ಗೆಳೆಯರು ಇಲ್ಲವಾಗಿದ್ದಾರೆ. ಇನ್ನು ಮುಂದೆ ದೂರದ ಶಾಲೆಗೆ ಹೋಗಬೇಕು.
–ಹೃಸ್ವಾನ್ ವೆಳ್ಳಾರ್‌ಮಲ ಶಾಲೆಯ ವಿದ್ಯಾರ್ಥಿಇನ್ನು ಮೇಪ್ಪಾಡಿಯಲ್ಲಿ ಶಾಲೆ
ಚೂರಲ್‌ಮಲ ಭಾಗದ ಶಾಲೆಗಳ ವಿದ್ಯಾರ್ಥಿಗಳ ಕಲಿಗೆ ಇನ್ನು 13 ಕಿಲೊಮೀಟರ್ ದೂರದ ಪಟ್ಟಣ ಮೇಪ್ಪಾಡಿಯಲ್ಲಿ ಮುಂದುವರಿಯಲಿದೆ. ವೆಳ್ಳಾರ್‌ಮಲ ಸರ್ಕಾರಿ ವೃತ್ತಿಪರ ಶಾಲೆ ಮುಂಡಕ್ಕೈ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿವಿಧ ಶಾಲೆಗಳ 378 ವಿದ್ಯಾರ್ಥಿಗಳು 10 ಕಾಳಜಿ ಕೇಂದ್ರಗಳಲ್ಲಿ ಕಲಿಯುತ್ತಿದ್ದಾರೆ. 231 ಮಂದಿ ಸಂಬಂಧಿಕರ ಮನೆಯಲ್ಲಿದ್ದಾರೆ. 5 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 276 ವಿದ್ಯಾರ್ಥಿಗಳ ಪುಸ್ತಕ ಮತ್ತು ಪಠ್ಯ ಸಾಮಗ್ರಿಗಳು ಕೊಚ್ಚಿಕೊಂಡು ಹೋಗಿವೆ. ಮೇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಹೈಸ್ಕೂಲ್ ಮತ್ತು ಮೇಪ್ಪಾಡಿ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ತರಗತಿಗಳು ನಡೆಯಲಿವೆ. ಊಟದ ಮನೆ ಪ್ರಯೋಗಾಲಯ ವಾಚನಾಲಯ ಮುಂತಾದವು ಇದಕ್ಕೆ ಸಜ್ಜಾಗಿವೆ.