ವಯನಾಡು: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಭೂಕುಸಿತದಲ್ಲಿ ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ(ಪಿಎಂಎನ್ಆರ್ಎಫ್) ತಲಾ ₹2 ಲಕ್ಷ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳಿಗೆ ತಲಾ₹ 50,000 ಪರಿಹಾರ ಘೋಷಿಸಲಾಗಿದೆ.

ಘಟನೆ ಕುರಿತಂತೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆ ಮಾತನಾಡಿ, ಕೇಂದ್ರದಿಂದ ಅಗತ್ಯವಿರುವ ಎಲ್ಲ ನೆರವು ಒದಗಿಸುವುದಾಗಿ ಭರವಸೆ ನೀಡಿರುವುದಾಗಿ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

‘ವಯನಾಡುವಿನ ವಿವಿಧೆಡೆ ಸಂಭವಿಸಿರುವ ಭೂಕುಸಿತದ ಘಟನೆಗಳಿಂದ ತೀವ್ರ ನೋವಾಗಿದೆ. ಸದ್ಯ, ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ಸಿಎಂ ಪಿಣರಾಯಿ ವಿಜಯನ್ ಜೊತೆ ಮಾತನಾಡಿದ್ದು, ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದೇನೆ’ ಎಂದು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ವಯನಾಡು ಜಿಲ್ಲೆಯ ಮೆಪ್ಪಾಡುವಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ.

ಈವರೆಗೆ 49 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ವಿವಿಧ ಆಸ್ಪತ್ರೆಗಳ ಶವಾಗಾರಗಳಲ್ಲಿ ಇಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದೂ ಅವರು ತಿಳಿಸಿದ್ದಾರೆ.
.ವಯನಾಡು | ಮೃತರ ಸಂಖ್ಯೆ 123ಕ್ಕೆ ಏರಿಕೆ: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.