ಚೆನ್ನೈ: ‘ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದು ಹಾಕುತ್ತೇವೆ’ ಎಂದು ವಿದ್ಯಾರ್ಥಿಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಅಭಯ ನೀಡಿದ್ದಾರೆ.

ರಾಜ್ಯದ ಕ್ರೋಮ್‌ಪೇಟ್‌ನಲ್ಲಿ ನೀಟ್ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಉಲ್ಲೇಖಿಸಿ ಅವರು ಈ ರೀತಿ ಹೇಳಿದ್ದಾರೆ.

‘ಯಾರೂ ಕೂಡ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ನಾನು ವಿದ್ಯಾರ್ಥಿಗಳೊಂದಿಗೆ ಮನವಿ ಮಾಡುತ್ತೇನೆ. ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದುಹಾಕುತ್ತೇವೆ. ತಮಿಳುನಾಡು ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತವಾಗಿದೆ’ ಎನ್ನುವ ಅವರ ಹೇಳಿಕೆಯನ್ನು ‘ಎಎನ್‌ಐ’ ಸುದ್ದಿ ಸಂಸ್ಥೆ ‘ಎಕ್ಸ್’ನಲ್ಲಿ ಬರೆದುಕೊಂಡಿದೆ.

‘ನೀಟ್ ಅಭ್ಯರ್ಥಿ ಜಗದೀಶ್ವರನ್, ಆತ್ಮಹತ್ಯೆ ಮಾಡಿಕೊಂಡಿದ್ದು ಕೇಳಿ ನನಗೆ ಆಶ್ಚರ್ಯವಾಯಿತು. ಅವರ ಪೋಷಕರನ್ನು ಸಮಾಧಾನ ಮಾಡುವುದು ಹೇಗೆ ಎಂದು ಯೋಚಿಸುತ್ತಿರುವಾಗಲೇ, ಅವರ ತಂದೆ ಸೆಲ್ವಶೇಖರ್ ಕೂಡ ಆತ್ಮಹತ್ಯೆ ಮಾಡಿಕೊಂಡರು. ಜಗದೀಶ್ವರನ್ ಅವರ ಕುಟುಂಬ, ಸ್ನೇಹಿತ ವರ್ಗ ಹಾಗೂ ಬಂಧು ಬಳಗಕ್ಕೆ ಹೇಗೆ ಸಾಂತ್ವನ ಹೇಳುವುದು ಎಂದು ನನಗೆ ತಿಳಿಯತ್ತಿಲ್ಲ. ವೈದ್ಯನಾಗುವ ಆಸೆ ಕಂಡಿದ್ದ ಬುದ್ದಿವಂತ ವಿದ್ಯಾರ್ಥಿಯೊಬ್ಬ ನೀಟ್‌ನಿಂದ ಆತ್ಮಹತ್ಯೆ ಮಾಡಿಕೊಂಡವರ ಸಾಲಿಗೆ ಸೇರಿದ್ದು ದುರಂತ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.