ಶ್ರೀನಗರ: ‘ಈ ವಾರಾಂತ್ಯದಲ್ಲಿ ಜಮ್ಮು ಕಾಶ್ಮೀರದ ಬಹುತೇಕ ಎಲ್ಲಾ ದೂರವಾಣಿಗಳು ಪುನಃ ಕಾರ್ಯಾರಂಭ ಮಾಡಲಿವೆ. ಮುಂದಿನ ವಾರದಿಂದ ಶಾಲಾ ಕಾಲೇಜುಗಳು ಆರಂಭವಾಗುವವು. ಹಂತಹಂತವಾಗಿ ಎಲ್ಲಾ ನಿರ್ಬಂಧಗಳನ್ನು ಸಡಿಲಿಸಲಾಗುವುದು’ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಬಿ.ವಿ.ಆರ್. ಸುಬ್ರಮಣ್ಯಂ ಗುರುವಾರ ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಈ ವಿವರಗಳನ್ನು ನೀಡಿದ ಅವರು, ‘ಶುಕ್ರವಾರ ಬಹುತೇಕ ಎಲ್ಲಾ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಿವೆ. ಕೆಲವು ಕಚೇರಿಗಳಿಗೆ ಸಾಕಷ್ಟು ಜನರು ಭೇಟಿನೀಡಿದ್ದರು. ಆಗಸ್ಟ್ 5ರಿಂದ ರಾಜ್ಯದಲ್ಲಿ ನಿರ್ಬಂಧಗಳನ್ನು ಜಾರಿ ಮಾಡಲಾಗಿದ್ದು, ಆ ದಿನದಿಂದ ಇಲ್ಲಿಯವರೆಗೂ ರಾಜ್ಯದಲ್ಲಿ ಗಲಭೆಯಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಮುಂದಿನ ಕೆಲವೇ ದಿನಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲಾಗುವುದು’ ಎಂದು ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಅವರು ಆಯ್ದ ಪ್ರಶ್ನೆಗಳಿಗಷ್ಟೇ ಉತ್ತರ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.