ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ರೂಪನಾರಾಯಣ ನದಿಯಲ್ಲಿ ದೋಣಿ ಮುಳುಗಿ ಐವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೌರಾ ಜಿಲ್ಲೆಯ ಬೆಲ್ಗಾಚಿಯಾ, ಶಿಬ್‌ಪುರ ಮತ್ತು ಬಗ್ನಾನ್‌ನಿಂದ 19 ಜನರ ಗುಂಪು ಪಶ್ಚಿಮ ಮೇದಿನಿಪುರ ಜಿಲ್ಲೆಯ ದಾಸ್‌ಪುರದ ಟ್ರಿಬೇನಿ ಪಾರ್ಕ್‌ಗೆ ಪಿಕ್‌ನಿಕ್‌ಗೆ ತೆರಳಿತ್ತು. ಗುರುವಾರ ರಾತ್ರಿ ಮನೆಗೆ ಮರಳುತ್ತಿದ್ದ ವೇಳೆ ನದಿಯ ಮಧ್ಯದಲ್ಲಿ ದೋಣಿ ಮಗುಚಿದೆ.

ಕಿರುಚಾಟ ಕೇಳಿ ಇತರ ದೋಣಿಗಳ ಸಹಾಯದಿಂದ ಸಾಧ್ಯವಾದಷ್ಟು ಜನರನ್ನು ರಕ್ಷಿಸಲಾಗಿದೆ. ಆದರೆ ಐವರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ರಕ್ಷಣಾ ಕಾರ್ಯಕ್ಕಾಗಿ ಎರಡು ವಿಪತ್ತು ನಿರ್ವಹಣಾ ತಂಡ ಮತ್ತು ನಾಗರಿಕ ರಕ್ಷಣಾ ಸಿಬ್ಬಂದಿ ಧಾವಿಸಿದ್ದಾರೆ' ಎಂದು ಹೌರಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಪ್ರಿಯಾ ತಿಳಿಸಿದ್ದಾರೆ.

'ಘಟನೆಯಲ್ಲಿ ರಕ್ಷಿಸಲ್ಪಟ್ಟ ಕೆಲವರನ್ನು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಕಳುಹಿಸಲಾಗಿದೆ. ಸದ್ಯ ರಕ್ಷಣಾ ಕಾರ್ಯ ನಡೆಯುತ್ತಿದೆ' ಎಂದು ಪೊಲೀಸ್ ವರಿಷ್ಠಾಧಿಕಾರಿ ಸ್ವಾತಿ ಭಂಗಾಲಿಯಾ ಮಾಹಿತಿ ನೀಡಿದ್ದಾರೆ.
.ಗುಜರಾತ್: ದೋಣಿ ಮುಳುಗಿ 14 ವಿದ್ಯಾರ್ಥಿಗಳು ಸೇರಿ 16 ಮಂದಿ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.