ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆಯ ಮುಂಬರುವ ಚುನಾವಣೆಯಲ್ಲಿ, 2016ರಲ್ಲಿ ತಾವು ಜಯಗಳಿಸಿದ್ದ ಎಲ್ಲ ಕ್ಷೇತ್ರಗಳಲ್ಲಿ ಮರುಸ್ಪರ್ಧೆ ಮಾಡಲು ಕಾಂಗ್ರೆಸ್ ಮತ್ತು ಎಡಪಕ್ಷಗಳು ತೀರ್ಮಾನಿಸಿವೆ. ಉಳಿದ ಕ್ಷೇತ್ರಗಳಲ್ಲಿ ಸ್ಪರ್ಧೆ, ಸೀಟು ಹಂಚಿಕೆಗೆ ಸಂಬಂಧಿಸಿ ಮಾತುಕತೆ ನಡೆದಿದೆ.

2016ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿಕೂಟ 77 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಈ ಪೈಕಿ ಕಾಂಗ್ರೆಸ್ ಪಕ್ಷವು 44 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.

ಬಾಕಿ ಉಳಿದ 217 ಕ್ಷೇತ್ರಗಳ ಸೀಟು ಹಂಚಿಕೆ ಕುರಿತು ಚರ್ಚೆ ನಡೆದಿದೆ ಎಂದು ಕಾಂಗ್ರೆಸ್ ನಾಯಕ ಪ್ರದೀಪ್ ಭಟ್ಟಾಚಾರ್ಯ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮಾಸಾಂತ್ಯದ ವೇಳೆಗೆ ಸೀಟು ಹಂಚಿಕೆ ಪ್ರಕ್ರಿಯೆಯು ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳದ ಎಡರಂಗದ ಅಧ್ಯಕ್ಷ ಮತ್ತು ಸಿಪಿಎಂ ಪಾಲಿಟ್ ಬ್ಯೂರೊ ಸದಸ್ಯ ಬಿಮನ್ ಬೋಸ್ ಅವರು, ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಜಂಟಿಯಾಗಿಯೇ ಪ್ರಚಾರ ನಡೆಸುವ ಕುರಿತಂತೆಯೂ ಮಾತುಕತೆ ನಡೆದಿದೆ ಎಂದು ತಿಳಿಸಿದರು.

ಹಾಲಿ ಗೆದ್ದಿರುವ ಕ್ಷೇತ್ರಗಳಲ್ಲಿ ಮರುಸ್ಪರ್ಧೆ ಕುರಿತ ನಿರ್ಧಾರ ಉಭಯ ಪಕ್ಷಗಳಲ್ಲಿ ಸಮಾಧಾನ ಮೂಡಿಸಿದೆ. ಕೆಲ ಕ್ಷೇತ್ರಗಳಲ್ಲಿ ಸ್ಪರ್ಧೆ ಕುರಿತು ಗೊಂದಲ ನಿರ್ಮಾಣವಾಗಿತ್ತು. ಉಳಿದ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಯಾವ ಪಕ್ಷ ಎರಡು ಅಥವಾ ಮೂರನೇ ಸ್ಥಾನದಲ್ಲಿತ್ತು, ಪಡೆದಗಳಿಗೆ ಪ್ರಮಾಣ ಆಧರಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.

ಇತ್ತೀಚಿನ ಬಿಹಾರ ಚುನಾವಣೆಯಲ್ಲಿನ ಅನುಭವವನ್ನು ಆಧರಿಸಿ ಕಾಂಗ್ರೆಸ್ ಪಕ್ಷವು, ಪಶ್ಚಿಮ ಬಂಗಾಳದಲ್ಲಿ ಪಕ್ಷದ ಅಸ್ತಿತ್ವ ಚೆನ್ನಾಗಿರುವ ಮತ್ತು ಗಣನೀಯ ಮತಪ್ರಮಾಣ ಇರುವ ಕ್ಷೇತ್ರಗಳಿಗೆ ಹೆಚ್ಚಿನ ಗಮನಹರಿಸಲು ತೀರ್ಮಾನಿಸಿದೆ ಎಂದು ಆ ಪಕ್ಷದ ಮುಖಂಡರೊಬ್ಬರು ತಿಳಿಸಿದರು.

ಇದನ್ನೂ ಓದಿ:ಗಣತಂತ್ರ ದಿನದ ಪಥಸಂಚಲನದಲ್ಲಿ ಬಾಂಗ್ಲಾ ಸೇನೆ ಭಾಗವಹಿಸಿದ್ದೇಕೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.