ಕೋಲ್ಕತ್ತ: ಅತ್ಯಾಚಾರ ಮತ್ತು ಕೊಲೆ ಎಸಗಿದ ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಿ ಮರಣದಂಡನೆ ಪ್ರಸ್ತಾಪಿಸಿರುವ ಅತ್ಯಾಚಾರ ತಡೆ ಮಸೂದೆಯನ್ನು ಪಶ್ಚಿಮ ಬಂಗಾಳದ ವಿಧಾನಸಭೆ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದೆ.

'ಅಪರಾಜಿತ ಮಹಿಳೆ ಮತ್ತು ಮಕ್ಕಳ ಮಸೂದೆ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನು ಮತ್ತು ತಿದ್ದುಪಡಿ ಮಸೂದೆ 2024)' ಅನ್ನು ವಿಪಕ್ಷಗಳ ಬೆಂಬಲದೊಂದಿಗೆ ಅಂಗೀಕರಿಸಲಾಯಿತು.

ಆದರೂ ಮಸೂದೆಯಲ್ಲಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮಂಡಿಸಿದ ಪ್ರಸ್ತಾವಿತ ತಿದ್ದುಪಡಿಗಳನ್ನು ಸದನವು ಅಂಗೀಕರಿಸಲಿಲ್ಲ.

ಆರೋಪಿಯು ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಎಸಗಿದ್ದು ದೃಢಪಟ್ಟರೆ ಜೀವಾವಧಿ ಜೈಲು ಶಿಕ್ಷೆ ವಿಧಿಸುವುದನ್ನು ಮಸೂದೆ ಒಳಗೊಂಡಿದೆ.

ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಅಪರಾಧಿಗೆ 'ಪೆರೋಲ್' ಇಲ್ಲದೆ ಜೀವಾವಧಿ ಶಿಕ್ಷೆ ಇದು ಒಳಗೊಂಡಿದೆ.

ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆ ಬಳಿಕ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದರ ಬೆನ್ನಲ್ಲೇ ಅತ್ಯಾಚಾರ, ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮಸೂದೆ ಮಂಡಿಸುವುದಾಗಿ ಮಮತಾ ಬ್ಯಾನರ್ಜಿ ಅವರ ಸರ್ಕಾರ ಘೋಷಿಸಿತ್ತು. ಈ ಸಂಬಂಧ ಎರಡು ದಿನಗಳ ವಿಶೇಷ ಅಧಿವೇಶನವನ್ನೂ ಕರೆಯಲಾಗಿತ್ತು.
.ವೈದ್ಯೆಯ ಅತ್ಯಾಚಾರ, ಕೊಲೆ: ಪಶ್ಚಿಮ ಬಂಗಾಳ ಸರ್ಕಾರ, ಪೊಲೀಸರಿಗೆ ‘ಸುಪ್ರೀಂ’ ತರಾಟೆ.ಕೋಲ್ಕತ್ತ ಆರ್.ಜಿ. ಕರ್ ಆಸ್ಪತ್ರೆ ಅವ್ಯವಹಾರ: ಸಿಬಿಐ ಶೋಧ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.