ಬುಧವಾರ, 3 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

NEET ರದ್ದುಮಾಡಿ, ರಾಜ್ಯಗಳೇ ಪರೀಕ್ಷೆ ನಡೆಸಲಿ: ಪ್ರಧಾನಿ ಮೋದಿಗೆ ಸಿಎಂ ಮಮತಾ ಪತ್ರ

Published 24 ಜೂನ್ 2024, 14:33 IST
Last Updated 24 ಜೂನ್ 2024, 14:33 IST
ಅಕ್ಷರ ಗಾತ್ರ

ಕೋಲ್ಕತ್ತ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ಎನ್‌ಇಇಟಿ – ನೀಟ್‌) ರದ್ದುಮಾಡಬೇಕು. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ರಾಜ್ಯಗಳೇ ಪರೀಕ್ಷೆಗಳನ್ನು ನಡೆಸುವ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಒತ್ತಾಯಿಸಿದ್ದಾರೆ.

ನೀಟ್‌–ಯುಜಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

'ರಾಜ್ಯ ಸರ್ಕಾರಗಳೇ ಪರೀಕ್ಷೆಗಳನ್ನು ಆಯೋಜಿಸುತ್ತಿದ್ದ ಈ ಹಿಂದಿನ ವ್ಯವಸ್ಥೆಯನ್ನು ಪುನಃಸ್ಥಾಪಿಸಬೇಕು ಹಾಗೂ ನೀಟ್‌ ಪರೀಕ್ಷೆಯನ್ನು ರದ್ದು ಮಾಡಬೇಕು ಎಂದು ಬಲವಾಗಿ ಒತ್ತಾಯಿಸುತ್ತೇನೆ' ಎಂದು ಮಮತಾ ಹೇಳಿದ್ದಾರೆ.

'ಹೀಗೆ ಮಾಡುವುದರಿಂದ, ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಬಹುದು ಹಾಗೂ ವಿದ್ಯಾರ್ಥಿಗಳಲ್ಲಿ ವ್ಯವಸ್ಥೆಯ ಬಗ್ಗೆ ಭರವಸೆ ಮೂಡಿಸಬಹುದು' ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT