ಕೋಲ್ಕತ್ತ: ‘ಮಾನವ ಹಕ್ಕುಗಳ ಉಲ್ಲಂಘನೆಗೆ ರಾಜ್ಯವು ಉದಾಹರಣೆಯಾಗಿದೆ’ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಶುಕ್ರವಾರ ತೃಣಮೂಲ ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಾನವ ಹಕ್ಕುಗಳ ದಿನಾಚರಣೆ ನಿಮಿತ್ತ ಶುಕ್ರವಾರ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಜಾಪ್ರಭುತ್ವ ವ್ಯವಸ್ಥೆಯು ಪ್ರವರ್ಧಮಾನಕ್ಕೆ ಬರಲು ಜನರ ಹಕ್ಕುಗಳನ್ನು ಎತ್ತಿಹಿಡಿಯುವುದು ಅವಶ್ಯಕ’ ಎಂದು ಹೇಳಿದರು.

‘ಪಶ್ಚಿಮ ಬಂಗಾಳವು ಮಾನವ ಹಕ್ಕುಗಳ ಉಲ್ಲಂಘನೆಗೆ ಉದಾಹರಣೆಯಾಗಿದೆ. ಜನರಲ್ಲಿ ಭಯವಿದೆ, ಅವರು ಇದನ್ನು ಬಹಿರಂಗವಾಗಿ ಚರ್ಚಿಸಲು ಸಹ ಸಾಧ್ಯವಿಲ್ಲ’ ಎಂದು ಧನಕರ್ ಅವರು ಟ್ವೀಟ್ ಮಾಡಿದ್ದಾರೆ.

‘ಮಾನವ ಹಕ್ಕುಗಳ ಉಲ್ಲಂಘನೆ ಕ್ರಮವು ಚಿಂತನಾರ್ಹ’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಿರುವ ಅವರು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧಿಕೃತ ಟ್ವೀಟ್ ವಿಳಾಸಕ್ಕೆ ಟ್ಯಾಗ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.