ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಭರವಸೆ ನೀಡಿದ್ದಾರೆ.

ಬುಧವಾರ ಬೆಳಿಗ್ಗೆ ಮಮತಾ ಬ್ಯಾನರ್ಜಿ ಅವರಿಗೆ ಕರೆ ಮಾಡಿದ ಪ್ರಧಾನಿ, ರಾಜ್ಯದ ವಿವಿಧ ಜಲಾಶಯಗಳಿಂದ ನೀರು ಹೊರಬಿಟ್ಟ ನಂತರ, ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಚರ್ಚಿಸಿದರು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಹೌರಾ ಜಿಲ್ಲೆಯ ಪ್ರವಾಹ ಪೀಡಿತ ಉದಯನಾರಾಯಣಪುರಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಅಲ್ಲಿನ ಪ್ರವಾಹ ಪರಿಸ್ಥಿತಿ ಮತ್ತು ಅದರಿಂದ ಉಂಟಾದ ಹಾನಿಯ ಬಗ್ಗೆ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ವಿವರವಾದ ವರದಿಯನ್ನು ಸಲ್ಲಿಸುವುದಾಗಿ ಪ್ರಧಾನಿಗೆ ಹೇಳಿದ್ದಾರೆಂದು ತಿಳಿದುಬಂದಿದೆ.

ದಾಮೋದರ್ ವ್ಯಾಲಿ ಕಾರ್ಪೊರೇಷನ್ ಮತ್ತು ದುರ್ಗಾಪುರ ಬ್ಯಾರೇಜ್ ನಿಂದ ನೀರು ಹೊರಬಿಟ್ಟಿರುವ ಕಾರಣದಿಂದಾಗಿ ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಸುಮಾರು 3 ಲಕ್ಷ ಜನರು ಸ್ಥಳಾಂತರಗೊಂಡಿದ್ದಾರೆ.

ಸಚಿವ ಸಂಪುಟ: ಮೈಸೂರು ಭಾಗದ ಐದು ಜಿಲ್ಲೆಗಳ ಪೈಕಿ ಮಂಡ್ಯಕ್ಕಷ್ಟೇ ಪ್ರಾತಿನಿಧ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.