ಕೋಲ್ಕತ್ತ: ಪಶ್ಚಿಮ ಬಂಗಾಳದ ಝಾರ್ಗ್ರಾಮ್ ಕ್ಷೇತ್ರದ ಬಿಜೆಪಿ ಸಂಸದ ಕುನಾರ್ ಹೆಮ್ಬ್ರಮ್ ಅವರು ಶನಿವಾರ ಲೋಕಸಭೆಯ ಸದಸ್ಯತ್ವ ಮತ್ತು ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

ಮೊದಲ ಬಾರಿಗೆ ಸಂಸದರಾಗಿದ್ದ ಹೆಮ್ಬ್ರಮ್, ‘ವೈಯಕ್ತಿಕ ಕಾರಣಗಳಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ರಾಜಕಾರಣದಲ್ಲಿ ಮುಂದುವರಿಯುವ ಆಸಕ್ತಿ ಇಲ್ಲ. ಯಾವುದೇ ಪಕ್ಷವನ್ನು ಸೇರುತ್ತಿಲ್ಲ. ಪುಸ್ತಕ ಬರವಣಿಗೆ ಮತ್ತು ಸಮಾಜ ಸೇವೆಯಲ್ಲಿ ನನ್ನ ಸಮಯ ಕಳೆಯಲಿದ್ದೇನೆ’ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹೆಮ್ಬ್ರಮ್ ಕೆಲವು ದಿನಗಳ ಹಿಂದೆಯೇ ತಮ್ಮ ನಿರ್ಧಾರದ ಬಗ್ಗೆ ಪಕ್ಷದ ನಾಯಕರಿಗೆ ತಿಳಿಸಿದ್ದರು ಎಂದು ಬಿಜೆಪಿ ರಾಜ್ಯ ವಕ್ತಾರ ಸಮಿಕ್ ಭಟ್ಟಾಚಾರ್ಯ ಹೇಳಿದ್ದಾರೆ.

ಜಂಗಲ್ ಮಹಲ್ ಪ್ರದೇಶದ ಝಾರ್ಗ್ರಾಮ್ ಲೋಕಸಭಾ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಗೆಲುವು ಕಂಡಿರುವ ಬಿಜೆಪಿ ಈವರೆಗೆ ಈ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಪ್ರಕಟಿಸಿಲ್ಲ.

‘ಬಿಜೆಪಿಯು ಈ ಕ್ಷೇತ್ರದಲ್ಲಿ ಸೋಲು ಕಾಣಲಿದೆ ಎನ್ನುವುದು ಹೆಮ್ಬ್ರಮ್ ಅವರಿಗೆ ಗೊತ್ತಿದೆ. ಹಾಗಾಗಿಯೇ ಅವರು ಪಕ್ಷ ತೊರೆದಿದ್ದಾರೆ’ ಎಂದು ಟಿಎಂಸಿ ಸಂಸದ ಶಂತನು ಸೆನ್ ಪ್ರತಿಕ್ರಿಯಿಸಿದ್ದಾರೆ.
.ಪಶ್ಚಿಮ ಬಂಗಾಳ: ಬಿಜೆಪಿ ಸೇರಿದ ಟಿಎಂಸಿ ನಾಯಕ ತಪಸ್ ರಾಯ್.ಪಶ್ಚಿಮ ಬಂಗಾಳ | TMC ಜೊತೆ ಸೀಟು ಹಂಚಿಕೆ; ಕಾಂಗ್ರೆಸ್ಗೆ 7 ಸೀಟುಗಳು ಸಾಧ್ಯತೆ.ಸಂದೇಶ್ಖಾಲಿ ಹಿಂಸಾಚಾರ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ಎನ್ಎಚ್ಆರ್ಸಿ ನೋಟಿಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.