ನವದೆಹಲಿ: ಸತತ ಮೂರನೆಯ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಬಿಳಿ ಬಣ್ಣದ ಕುರ್ತಾ, ನೀಲಿ ಬಣ್ಣದ ಜಾಕೆಟ್ ಧರಿಸಿದ್ದರು

ಪ್ರಮಾಣ ವಚನ ಸ್ವೀಕರಿಸುವ ಮುನ್ನ ನರೇಂದ್ರ ಮೋದಿ ಅವರು ಬೆಳಿಗ್ಗೆ ರಾಜ್ಘಾಟ್ಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ಅವರ ಸ್ಮಾರಕದಲ್ಲಿ ನಮನ ಸಲ್ಲಿಸಿದರು. ನಂತರ, ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕ ‘ಸುದೈವ್ ಅಟಲ್’ ಮತ್ತು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಅವರು ನಮನ ಸಲ್ಲಿಸಿದರು

ಜೆ.ಪಿ. ನಡ್ಡಾ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಾಲ್ಕು ವರ್ಷಗಳಿಗಿಂತ ಹೆಚ್ಚಿನ ಅವಧಿಯಿಂದ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ನಡ್ಡಾ ಅವರು 2014ರಿಂದ 2019ರವರೆಗೆ ಕೇಂದ್ರ ಆರೋಗ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು

ಲೋಕಸಭೆಯ ಅತ್ಯಂತ ಶ್ರೀಮಂತ ಸದಸ್ಯ ಪೆಮ್ಮಸಾನಿ ಚಂದ್ರಶೇಖರ್ ಅವರು ಭಾನುವಾರ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರ ಕುಟುಂಬದ ಘೋಷಿತ ಆಸ್ತಿಯ ಮೌಲ್ಯ ₹5,700 ಕೋಟಿ

ಚಲನಚಿತ್ರ ನಟರಾದ ಶಾರುಕ್ ಖಾನ್, ಅನಿಲ್ ಕಪೂರ್, ರಜನಿಕಾಂತ್, ಅಕ್ಷಯ್ ಕುಮಾರ್, ರವೀನಾ ಟಂಡನ್, ಅನುಪಮ್ ಖೇರ್, ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು

ಮುಖೇಶ್ ಅಂಬಾನಿ ಅವರು ಪುತ್ರರಾದ ಅನಂತ್, ಆಕಾಶ್ ಮತ್ತು ಅಳಿಯ ಆನಂದ್ ಪಿರಾಮಲ್ ಅವರೊಂದಿಗೆ ಪಾಲ್ಗೊಂಡಿದ್ದರು. ಗೌತಮ್ ಅದಾನಿ ಅವರು ಪತ್ನಿ ಪ್ರೀತಿ ಮತ್ತು ಸಹೋದರ ರಾಜೇಶ್ ಅದಾನಿ ಅವರೊಂದಿಗೆ ಭಾಗವಹಿಸಿದ್ದರು

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಪತ್ನಿಯೊಂದಿಗೆ ಹಾಜರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.