ಲಖನೌ: ಅಧಿಕಾರಕ್ಕೇರಿದ 24 ಗಂಟೆಯೊಳಗೆ 'ಅಗ್ನಿಪಥ' ಯೋಜನೆಯನ್ನು ರದ್ದುಗೊಳಿಸುತ್ತೇವೆ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ನಿವೃತ್ತ ಅಗ್ನಿವೀರರಿಗೆ ಮೀಸಲಾತಿ ಘೋಷಿಸಿದ ಒಂದು ದಿನದ ಬೆನ್ನಲ್ಲೇ ಅಖಿಲೇಶ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬರೆದಿರುವ ಅಖಿಲೇಶ್, 'ಯೋಧರ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ತಾತ್ಕಾಲಿಕ ಅಗ್ನಿವೀರರ ನೇಮಕಾತಿಯನ್ನು ಅಧಿಕಾರಕ್ಕೇರಿದ 24 ಗಂಟೆಯೊಳಗೆ ರದ್ದುಗೊಳಿಸಲಾಗುವುದು' ಎಂದು ಹೇಳಿದ್ದಾರೆ.

'ಅಗ್ನಿಪಥ ಯೋಜನೆ ರದ್ದುಗೊಳಿಸಿ ಹಳೆಯ ನೇಮಕಾತಿ ವ್ಯವಸ್ಥೆಯನ್ನು ಮರುಸ್ಥಾಪಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ' ಎಂದು ಅವರು ತಿಳಿಸಿದ್ದಾರೆ.

2022ರಲ್ಲಿ ಯೋಧರಿಗಾಗಿ ನಾಲ್ಕು ವರ್ಷಗಳ ಅಗ್ನಿಪಥ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿತ್ತು. ಇದಕ್ಕೆ ವಿಪಕ್ಷಗಳಿಂದ ಭಾರಿ ವಿರೋಧ ವ್ಯಕ್ತವಾಗಿತ್ತು.
.INDIA ಬಣ ಅಧಿಕಾರಕ್ಕೆ ಬಂದರೆ ಅಗ್ನಿವೀರ ಯೋಜನೆಯನ್ನು ಕಿತ್ತೊಗೆಯಲಿದೆ– ರಾಹುಲ್.ಅಗ್ನಿಪಥ ಮರುಪರಿಶೀಲಿಸಲು ಆಗ್ರಹ: ಆರಂಭದಲ್ಲೇ ಬಿಜೆಪಿಗೆ ತಲೆನೋವು .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.