ಕೋಲ್ಕತ್ತ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು (ಟಿಎಂಸಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಇದರೊಂದಿಗೆ ವಿಪಕ್ಷಗಳ 'ಇಂಡಿಯಾ ಮೈತ್ರಿಕೂಟ'ಕ್ಕೆ ಭಾರಿ ಹಿನ್ನಡೆಯಾಗಿದೆ.

ಸೀಟು ಹಂಚಿಕೆ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಮತಾ ಸ್ಪಷ್ಟಪಡಿಸಿದ್ದಾರೆ.

ಸೀಟು ಹಂಚಿಕೆ ಸಂಬಂಧ ನಾನು ಅವರಿಗೆ (ಕಾಂಗ್ರೆಸ್) ಪ್ರಸ್ತಾವನೆ ಮುಂದಿಟ್ಟಿದ್ದೆ. ಆದರೆ ಅವೆಲ್ಲವನ್ನು ಅವರು ತಿರಸ್ಕರಿಸಿದ್ದಾರೆ. ಹಾಗಾಗಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಲಾಗಿದೆ ಎಂದು ಮಮತಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.