ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ’ಸಂವಿಧಾನ’ದ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ.
.ಕೇಜ್ರಿವಾಲ್ ಜಾಮೀನಿಗೆ ಹೈಕೋರ್ಟ್ ಮಧ್ಯಂತರ ತಡೆ: ಜೂನ್ 26ಕ್ಕೆ SC ವಿಚಾರಣೆ.ವಿಧಾನ ಪರಿಷತ್ ಸದಸ್ಯರಾಗಿ 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಅಮಿತ್ ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದು, ಈ ನಡವಳಿಕೆ ಒಪ್ಪುವಂತಹದ್ದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ (ವಿರೋಧ ಪಕ್ಷಗಳ) ಸಂದೇಶವು ಜನರಿಗೆ ತಲುಪುತ್ತದೆ. ‘ಯಾವುದೇ ಶಕ್ತಿಯು ಭಾರತದ ಸಂವಿಧಾನವನ್ನು ಮುಟ್ಟಲು ಸಾಧವಿಲ್ಲ. ಸಂವಿಧಾನವನ್ನು ರಕ್ಷಿಸುವ ಕಾರ್ಯ ಮಾಡುತ್ತೇವೆ‘ ಎಂದು ಪ್ರಶ್ನೆಯೊಂದಕ್ಕೆ ರಾಹುಲ್ ಉತ್ತರಿಸಿದರು.
.ಲೋಕಸಭೆ ಅಧಿವೇಶನ: ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಎಚ್.ಡಿ. ಕುಮಾರಸ್ವಾಮಿ.ಲೋಕಸಭೆಯ ಮೊದಲ ಅಧಿವೇಶನ: ಸದಸ್ಯರಾಗಿ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ.
18ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಇಂಡಿಯಾ ಮೈತ್ರಿಕೂಟದ ನಾಯಕರು ಜೊತೆಯಾಗಿ ಸಂಸತ್ ಪ್ರವೇಶಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ವೇಳೆ ಎಲ್ಲ ನಾಯಕರು ಸಂವಿಧಾನ ಪುಸ್ತಕವನ್ನು ಹಿಡಿದುಕೊಂಡಿದ್ದರು.

ಸಂವಿಧಾನ ಉಳಿಸಲು ಜನರು ವಿರೋಧ ಪಕ್ಷಗಳನ್ನು ಬೆಂಬಲಿಸಿದ್ದಾರೆ ಎಂದು ಈ ಬಾರಿಯ ಚುನಾವಣಾ ಫಲಿತಾಂಶಗಳು ತೋರಿಸುತ್ತವೆ ಎಂದು ‘ಇಂಡಿಯಾ‘ ನಾಯಕರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.