ವಿಜಯವಾಡ: ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಯಾರನ್ನೂ ಸರ್ಕಾರ ಬಿಡುವುದಿಲ್ಲ ಎಂದು ಆಂಧ್ರ ಪ್ರದೇಶ ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಿರುಪತಿ ಲಾಡುವಿನಲ್ಲಿ ಕಲಬೆರಕೆ ನಡೆದಿದೆ ಎಂಬುದು ಎನ್‌ಡಿಡಿಬಿಯ ವರದಿಯಲ್ಲಿ ಸ್ಪಷ್ಟವಾಗಿದೆ. ಇದು ಆರೋಪವಲ್ಲ, ಚಂದ್ರಬಾಬು ನಾಯ್ಡು ಅವರು ಸತ್ಯವನ್ನು ಹೇಳುತ್ತಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಯಾರನ್ನೂ ನಾವು ಬಿಡುವುದಿಲ್ಲ. ಅಲ್ಲದೆ, ಈ ವಿಷಯವನ್ನು ಕೇವಲ ಸಿಬಿಐ ತನಿಖೆಗೆ ನಿಲ್ಲಿಸುವುದಿಲ್ಲ’ ಎಂದು ಹೇಳಿದ್ದಾರೆ.

ಈ ಮಾದರಿಯ ಅಕ್ರಮಗಳು ಮರುಕಳಿಸದಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಿಎಂ ಯೋಚಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ತಿರುಪತಿ ಲಾಡು ತಯಾರಿಸಲು ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆರೋಪಿಸಿದ್ದರು. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.
.ತಿರುಪತಿ ಪ್ರಸಾದದಲ್ಲಿ ಕಲಬೆರಕೆ ಖಂಡನೀಯ: ಸುಗುಣೇಂದ್ರತೀರ್ಥ ಸ್ವಾಮೀಜಿ.ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ತಿರುಪತಿ ಲಾಡು ವಿತರಿಸಲಾಗಿದೆ: ಮುಖ್ಯ ಅರ್ಚಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.