ನವದೆಹಲಿ: ಗುಜರಾತ್‌ನಲ್ಲಿ ಪಿಂಚಣಿ ಯೋಜನೆಯನ್ನು ಬಿಜೆಪಿ ಕೈಬಿಡುವ ಮೂಲಕ ಸ್ವಾವಲಂಬಿ ಹಿರಿಯ ನಾಗರಿಕರನ್ನು ಅವಲಂಬಿತರನ್ನಾಗಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅರೋಪಿಸಿದ್ದಾರೆ.

ಗುಜರಾತ್‌ನಲ್ಲಿ ಅಧಿಕಾರಕ್ಕೆ ಕಾಂಗ್ರೆಸ್ ಅನ್ನು ಆಯ್ಕೆ ಮಾಡಿದರೆ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿಗೊಳಿಸಲಾಗುವುದು. ರಾಷ್ಟ್ರವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ದುಡಿದ ಸರ್ಕಾರಿ ನೌಕರರು ಪಿಂಚಣಿ ಪಡೆಯುವುದು ಹಕ್ಕಾಗಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದ್ದಾರೆ.

ರಾಜಸ್ಥಾನ ಮತ್ತು ಛತ್ತೀಸಢಡದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿಗೆ ತಂದಿದ್ದೇವೆ. ಈಗ ಗುಜರಾತ್‌ನಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದರೆ ಪಿಂಚಣಿ ಯೋಜನೆಯನ್ನು ಪುನಃ ಜಾರಿಗೆ ತರುತ್ತೇವೆ ಎಂದು #CongressDegiOldPension ಹ್ಯಾಶ್‌ಟ್ಯಾಗ್ ಅಡಿ ಟ್ವೀಟ್ ಮಾಡಿದ್ದಾರೆ.

ಗುಜರಾತ್ ಕಾಂಗ್ರೆಸ್‌ನ ಹಿರಿಯ ಮುಖಂಡ ಅರ್ಜುನ್ ಮೊಧವಾಡಿಯಾ ಅವರು ಪಿಂಚಣಿ ಯೋಜನೆಯನ್ನು ಮರುಜಾರಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇತ್ತೀಚೆಗೆ ಸಾವಿರಾರು ನಿವೃತ್ತ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.