ಅಮರಾವತಿ/ಹೈದರಾಬಾದ್: ‘ಈ ಹಿಂದಿನ ವೈಎಸ್ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಹಾಗೂ ಅದಾನಿ ಸಮೂಹದ ವಿರುದ್ಧ ಕೇಳಿಬಂದಿರುವ ಲಂಚದ ಆರೋಪಕ್ಕೆ ಸಂಬಂಧಿಸಿ ಅಮೆರಿಕದ ಕೋರ್ಟ್ಗೆ ಸಲ್ಲಿಕೆಯಾಗಿರುವ ‘ಆರೋಪಪಟ್ಟಿ’ ಕುರಿತು ಸರ್ಕಾರ ಅಧ್ಯಯನ ನಡೆಸಲಿದೆ. ವಿದ್ಯುತ್ ಖರೀದಿ ಒಪ್ಪಂದದಲ್ಲಿ ಅಕ್ರಮವಾಗಿದ್ದು ಕಂಡು ಬಂದಲ್ಲಿ ಕ್ರಮ ಜರುಗಿಸಲಾಗುವುದು‘ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಶುಕ್ರವಾರ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಚರ್ಚೆ ವೇಳೆ ಮಾತನಾಡಿದ ಅವರು, ಅದಾನಿ ಸಮೂಹ ಹಾಗೂ ಈ ಹಿಂದಿನ ವೈಎಸ್ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಲಂಚದ ಆರೋಪ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

‘ಸೋಲಾರ್ ಎನರ್ಜಿ ಕಾರ್ಪೋರೇಷನ್ ಆಫ್ ಇಂಡಿಯಾ(ಎಸ್ಇಸಿಐ) ಮೂಲಕ ಸೌರ ವಿದ್ಯುತ್ ಮಾರಾಟ ಒಪ್ಪಂದ ಪಡೆಯಲು 2021ರಲ್ಲಿ ಗೌತಮ್ ಅದಾನಿ ಹಾಗೂ ಇತರರು, ಆಂಧ್ರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಉನ್ನತ ಅಧಿಕಾರಿಗಳಿಗೆ ಲಂಚ ನೀಡಲು ಮುಂದಾಗಿದ್ದರು ಎಂದು ಅಮೆರಿಕದ ಕೋರ್ಟ್ ಆರೋಪ ಹೊರಿಸಿದೆ’ ಎಂದು ನಾಯ್ದು ಹೇಳಿದರು.

‘ಈ ಹಿಂದಿನ ವೈಎಸ್ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಕೇಳಿಬಂದಿರುವ ಆರೋಪಗಳಿಂದಾಗಿ ಆಂಧ್ರಪ್ರದೇಶದ ಘನತೆಗೆ ಧಕ್ಕೆಯುಂಟಾಗಿದೆ’ ಎಂದರು.

‘ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾದಲ್ಲಿ, ಅವರನ್ನೇ ಹೊಣೆಗಾರರನ್ನಾಗಿ ಮಾಡಬೇಕು’ ಎಂದು ಕೆಲ ಶಾಸಕರು ಆಗ್ರಹಿಸಿದರು.

2019 ಹಾಗೂ 2024ರ ನಡುವೆ ಟಿಡಿಪಿ ವಿರೋಧ ಪಕ್ಷವಾಗಿತ್ತು. ಎಸ್ಇಸಿಐ ಒಪ್ಪಂದಲ್ಲಿ ಆಗಿದೆ ಎನ್ನಲಾದ ಅಕ್ರಮಗಳ ಕುರಿತು ಪಕ್ಷ ಧ್ವನಿ ಎತ್ತಿತ್ತು. ಈಗ ಆಂಧಪ್ರದೇಶದಲ್ಲಿ ಬಿಜೆಪಿ ಹಾಗೂ ಜನಸೇನಾ ಮೈತ್ರಿಯೊಂದಿಗೆ ಟಿಡಿಪಿ ಸರ್ಕಾರ ರಚಿಸಿದೆ. ಹೀಗಾಗಿ, ಅದಾನಿ ಸಮೂಹದ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ಟಿಡಿಪಿ ಎಚ್ಚರಿಕೆಯ ನಡೆ ಮೊರೆ ಹೋಗಿದೆ.

ಟಿಡಿಪಿ ಶಾಸಕ ಹಾಗೂ ಹಣಕಾಸು ಸಚಿವ ಪಯ್ಯವುಲ ಕೇಶವ ಅವರು 2022ರಲ್ಲಿ, ಎಸ್ಇಸಿಐ ಒಪ್ಪಂದದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದ್ದರು.

ಆರೋಪಿತರಿಗೆ ಕಾಂಗ್ರೆಸ್ ನಂಟು: ಪುರಂದರೇಶ್ವರಿ

‘ಅದಾನಿ ಸಮೂಹ ವಿರುದ್ಧದ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವವರೆಲ್ಲ ಕಾಂಗ್ರೆಸ್ ಪಕ್ಷದೊಂದಿಗೆ ನಂಟು ಹೊಂದಿದವರೇ ಆಗಿದ್ದಾರೆ. ಈ ಆರೋಪಗಳಿಗೆ ಸಂಬಂಧಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿಯನ್ನು ಹೊಣೆ ಮಾಡುವುದು ಎಷ್ಟು ಸರಿ’ ಎಂದು ಬಿಜೆಪಿ ಸಂಸದೆ ದಗ್ಗುಬಾಟಿ ಪುರಂದರೇಶ್ವರಿ ಪ್ರಶ್ನಿಸಿದ್ದಾರೆ. ‘ಈ ಆರೋಪಗಳಿಂದಾಗಿ ಉದ್ಭವಿಸಿರುವ ಸನ್ನಿವೇಶದಿಂದಾಗಿ ರಾಹುಲ್ ಗಾಂಧಿಯವರೇ ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ. ರಾಬರ್ಟ್ ವಾದ್ರಾ ಅವರು ಗೌತಮ್ ಅದಾನಿ ಅವರಿಗೆ ಆಪ್ತರು ಎಂಬುದನ್ನು ನಾವು ಮರೆಯಬಾರದು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.