ಮುಂಬೈ: ಮಹಾರಾಷ್ಟ್ರದ ಸೆಂಟ್ರಲ್ ರೈಲ್ವೆ ಮಾರ್ಗದಲ್ಲಿ ಇಗತ್‌ಪುರಿ–ಕಾಸರ ನಡುವೆ ಸಂಚರಿಸುವ ಲಖನೌ–ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಶುಕ್ರವಾರ ರಾತ್ರಿ 20 ವರ್ಷದ ಯುವತಿಯ ಮೇಲೆ ಕೆಲವು ದರೋಡೆಕೋರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ತಂಡ ನಾಲ್ವರನ್ನು ಬಂಧಿಸಿರುವುದಾಗಿ ಅವರು ತಿಳಿಸಿದ್ದಾರೆ.

‘ರೈಲು ಘಟ್ಟ ಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ ಈ ಕೃತ್ಯ ನಡೆದಿದೆ‘ ಎಂದು ಟ್ವೀಟ್ ಮಾಡಿರುವ ಮುಂಬೈ ಜಿಆರ್‌ಪಿಯ ಪೊಲೀಸ್ ಆಯುಕ್ತ ಖೈಸರ್ ಖಾಲಿದ್, ಘಟನೆಯ ವಿವರ ಮತ್ತು ಪೊಲೀಸರು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

‘ಆರೋಪಿಗಳು ಇಗತ್‌ಪುರಿಯಲ್ಲಿ (ಔರಂಗಾಬಾದ್ ರೈಲ್ವೆ ಜಿಲ್ಲೆ) ಲಖನೌ–ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನ ಡಿ–2 ಸ್ಲೀಪರ್ ಬೋಗಿಗೆ ಹತ್ತಿದ್ದಾರೆ. ರೈಲು ಘಟ್ಟ ಪ್ರದೇಶದ ಮೂಲಕ ಹಾದು ಹೋಗುವಾಗ ಈ ಅಪರಾಧ ಎಸಗಿದ್ದಾರೆ. ರೈಲು ಕಾಸರವನ್ನು ತಲುಪಿದಾಗ, ಪ್ರಯಾಣಿಕರು ಸಹಾಯ ಮಾಡುವಂತೆ ಕೂಗಿದ್ದಾರೆ‘ ಎಂದು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಮುಂಬೈನ ಜಿಆರ್‌ಪಿ ತಂಡ ತಕ್ಷಣ ಕಾರ್ಯಪ್ರವೃತ್ತರಾಗಿ, ಕಾರ್ಯಾಚರಣೆ ನಡೆಸಿ ಇಲ್ಲಿವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಯ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಆಕೆ ಆರೋಗ್ಯವಾಗಿದ್ದಾರೆ. ನಾವು ಎಲ್ಲ ಸಾಕ್ಷಿಗಳನ್ನು ಸಂಗ್ರಹಿಸುತ್ತಿದ್ದೇವೆ‘ ಎಂದು ಖೈಸರ್ ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.