ನವದೆಹಲಿ: ದೆಹಲಿ ಮೆಟ್ರೋದಲ್ಲಿ ಸೀರೆ ಸಿಲುಕಿ ಮೃತಪಟ್ಟ ಮಹಿಳೆಯ ಮಕ್ಕಳ ಭವಿಷ್ಯಕ್ಕೆ ದೆಹಲಿ ಮೆಟ್ರೋ ರೈಲು ನಿಗಮ (ಡಿಎಂಆರ್‌ಸಿ) ₹ 15 ಲಕ್ಷ ಪರಿಹಾರವನ್ನು ಬುಧವಾರ ಘೋಷಿಸಿದೆ. ಜೊತೆಗೆ, ಮಕ್ಕಳ ಶೈಕ್ಷಣಿಕ ವೆಚ್ಚವನ್ನೂ ಭರಿಸುವುದಾಗಿ ಭರವಸೆ ನೀಡಿದೆ.

ಡಿಸೆಂಬರ್ 14ರಂದು ದೆಹಲಿಯ ಇಂದ್ರಲೋಕ ಮೆಟ್ರೋ ನಿಲ್ದಾಣದಲ್ಲಿ ರೀನಾ (35) ಎಂಬ ಮಹಿಳೆಯ ಸೀರೆ ರೈಲಿನ ಬಾಗಿಲಿಗೆ ಸಿಲುಕಿತ್ತು. ಪ್ಲಾಟ್‌ಫಾರ್ಮ್ ಮೇಲೆ ಬಿದ್ದ ಮಹಿಳೆಯನ್ನು ರೈಲು ಸಾಕಷ್ಟು ದೂರ ಎಳೆದೊಯ್ದಿದ್ದಿತ್ತು

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಶನಿವಾರ ಮೃತಪಟ್ಟರು.

ಅವರ ಪತಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. 12 ವರ್ಷದ ಪುತ್ರಿ ಹಾಗೂ 10 ವರ್ಷದ ಪುತ್ರ ಇದ್ದಾರೆ. ತಂದೆ ಹಾಗೂ ತಾಯಿಯನ್ನು ಕಳೆದುಕೊಂಡ ಮಕ್ಕಳನ್ನು ನೋಡಿಕೊಳ್ಳಲು ಸಂಬಂಧಿಕರು ಮುಂದೆ ಬಾರದ ಕಾರಣ ಮಕ್ಕಳ ಭವಿಷ್ಯದ ಬಗ್ಗೆ ಮೆಟ್ರೋ ಪೂರಕ ನಿರ್ಧಾರ ಕೈಗೊಳ್ಳಬೇಕು ಎಂದು ದೆಹಲಿ ಸಾರಿಗೆ ಮಂತ್ರಿ ಗೆಹಲೋಟ್ ಒತ್ತಾಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.