ನವದೆಹಲಿ: ‘ಮಹಿಳಾ ಮೀಸಲು ಮಸೂದೆಯನ್ನು ಸ್ವಾಗತಿಸುತ್ತೇನೆ. ಆದರೆ ಇತರ ಹಿಂದುಳಿದ ವರ್ಗಗಳಿಗೆ ಇದರಲ್ಲಿ ಮೀಸಲಾತಿ ಇಲ್ಲದಿರುವುದರಿಂದ ಇದು ಅಪೂರ್ಣವಾಗಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಅಭಿಪ್ರಾಯ ಪಟ್ಟರು.

ಲೋಕಸಭೆಯಲ್ಲಿ ಮಹಿಳಾ ಮೀಸಲು ಮಸೂದೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡ ಅವರು, ಹಳೆ ಸಂಸತ್ ಭವನದಿಂದ ಹೊಸ ಸಂಸತ್ ಕಟ್ಟಡಕ್ಕೆ ಕಾರ್ಯಭಾರವನ್ನು ವರ್ಗಾಯಿಸಿದ ಸಂದರ್ಭದಲ್ಲಿ ರಾಷ್ಟ್ರಪತಿ ಅವರಿಗೆ ಆಹ್ವಾನ ನೀಡಬೇಕಿತ್ತು ಎಂದರು.

ಮಹಿಳೆಯರಿಗೆ ಅಧಿಕಾರ ವರ್ಗಾವಣೆಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯು ಭಾರಿ ದೊಡ್ಡ ಹೆಜ್ಜೆ. ಈಗಿನ ಮಸೂದೆ ಈ ದಿಸೆಯಲ್ಲಿ ಮತ್ತೊಂದು ಬೃಹತ್ ಹೆಜ್ಜೆ ಎಂದು ಹೇಳಿದರು.

‘ಮೋದಿ ಸರ್ಕಾರ ಜನಗಣತಿ ನಡೆಸಬೇಕು. ಯುಪಿಎ ಸರ್ಕಾರದ ಅವಧಿಯಲ್ಲಿ ನಡೆಸಿದ್ದ ಜನಗಣತಿಯ ದತ್ತಾಂಶವನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ ನಾವೇ ಇದನ್ನು ಬಿಡುಗಡೆ ಮಾಡುತ್ತೇವೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.