ನವದೆಹಲಿ: ‘ನಬಾರ್ಡ್ನಿಂದ ರಿಯಾಯಿತಿ ಬಡ್ಡಿದರದಲ್ಲಿ ನೀಡಲಾಗುವ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸಲು ಸಾಧ್ಯವಿಲ್ಲ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ನಿಯೋಗವು ಗುರುವಾರ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ಕೃಷಿಗೆ ನೆರವು ನೀಡುವ ಉದ್ದೇಶಕ್ಕಾಗಿ ಸಹಕಾರಿ ಸಂಸ್ಥೆಗಳಿಗೆ ನೀಡುವ ಸಾಲದ ಮೊತ್ತವನ್ನು ನಬಾರ್ಡ್ ಕಡಿತಗೊಳಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಸಾಲದ ಮೊತ್ತವನ್ನು ಹೆಚ್ಚಿಸುವಂತೆಯೂ ಮನವಿ ಸಲ್ಲಿಸಿತು.

‘ರಾಷ್ಟ್ರೀಕೃತ ಬ್ಯಾಂಕ್ಗಳು ಜನರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತಿವೆ. ಹೀಗಾಗಿ, ನಬಾರ್ಡ್ ಮೂಲಕ ನೀಡುತ್ತಿರುವ ಕೃಷಿ ಸಾಲದ ಮೊತ್ತವನ್ನು ಕಡಿತಗೊಳಿಸಲಾಗಿದೆ. ಜತೆಗೆ, ಎಲ್ಲ ರಾಜ್ಯಗಳ ಮೊತ್ತವನ್ನು ಕಡಿತಗೊಳಿಸಲಾಗಿದೆ. ಕರ್ನಾಟಕದ ಮೊತ್ತ ಮಾತ್ರ ಕಡಿತವಾಗಿದ್ದಲ್ಲ’ ಎಂದು ನಿರ್ಮಲಾ ಸಮಜಾಯಿಷಿ ನೀಡಿದರು.

ನಬಾರ್ಡ್ ಮೊತ್ತ ಕಡಿತ ಮಾಡಿದ್ದರಿಂದ ರೈತರಿಗೆ ರಿಯಾಯಿತಿ ದರದಲ್ಲಿ ಸಾಲ ನೀಡಲು ಸಮಸ್ಯೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ‘ಕರ್ನಾಟಕಕ್ಕೆ ಪ್ರತ್ಯೇಕ ನೀತಿ ರೂಪಿಸಲು ಸಾಧ್ಯವಿಲ್ಲ’ ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದರು. ಸಾಲ ವಿತರಣೆಯಲ್ಲಿ ಆಗಿರುವ ಸಮಸ್ಯೆಗಳ ಬಗ್ಗೆ ನಿಯೋಗವು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿತು. ಆಗ ಕೇಂದ್ರ ಸಚಿವರು, ‘ಈ ಸಂಬಂಧ ಆರ್ಬಿಐ ಗವರ್ನರ್ ಜತೆಗೆ ಸಮಾಲೋಚನೆ ನಡೆಸುತ್ತೇನೆ’ ಎಂದು ಭರವಸೆ ನೀಡಿದರು.

ರಾಜ್ಯದ ಮನವಿಯೇನು?:

2024-25ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರವು 35 ಲಕ್ಷ ರೈತರಿಗೆ ₹25 ಸಾವಿರ ಕೋಟಿ ಅಲ್ಪಾವಧಿ ಕೃಷಿ ಸಾಲ ವಿತರಿಸುವ ಗುರಿ ಹೊಂದಿದೆ. 2023-24ನೇ ಹಣಕಾಸು ವರ್ಷದಲ್ಲಿ ಅಲ್ಪಾವಧಿ ಸಹಕಾರಿ ಸಾಲ ವ್ಯವಸ್ಥೆಯಡಿ ರಾಜ್ಯದಲ್ಲಿ ₹22,902 ಕೋಟಿ ಅಲ್ಪಾವಧಿ ಕೃಷಿ ಸಾಲ ವಿತರಿಸಲಾಗಿದೆ.

2024-25ನೇ ಸಾಲಿನಲ್ಲಿ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅಲ್ಪಾವಧಿ ಸಹಕಾರಿ ಸಾಲ ವ್ಯವಸ್ಥೆಯಡಿ ₹9,162 ಕೋಟಿ ಕೃಷಿ ಸಾಲ ಮಿತಿಗೆ ಅನುಮೋದನೆ ನೀಡುವಂತೆ ನಬಾರ್ಡ್ಗೆ ಅಪೆಕ್ಸ್ ಬ್ಯಾಂಕ್ ಪ್ರಸ್ತಾವನೆ ಸಲ್ಲಿಸಿತ್ತು.

2023-24ನೇ ಸಾಲಿನಲ್ಲಿ ನಬಾರ್ಡ್ ಕೃಷಿ ಚಟುವಟಿಕೆಗಳಿಗೆ ₹5,600 ಕೋಟಿ ಮೊತ್ತದ ರಿಯಾಯಿತಿ ದರದ ಸಾಲದ ಮಿತಿಗೆ ಅನುಮೋದನೆ ನೀಡಿತ್ತು. 2024-25ನೇ ಸಾಲಿನಲ್ಲಿ ₹9,162 ಕೋಟಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ, ನಬಾರ್ಡ್ ಕೃಷಿ ಚಟುವಟಿಕೆಗಳಿಗೆ ₹2,340 ಕೋಟಿ ರಿಯಾಯಿತಿ ದರದ ಸಾಲ ಅನುಮೋದಿಸಿದೆ. ಇದು ಕಳೆದ ವರ್ಷಕ್ಕಿಂತ ಶೇ 58ರಷ್ಟು ಕಡಿಮೆ. ಆರ್ಬಿಐ ಸಾಮಾನ್ಯ ಸಾಲದ ಮಿತಿಯನ್ನು (ಎಲ್ಒಸಿ) ಕಡಿಮೆಗೊಳಿಸಿರುವುದೇ ಪ್ರಸ್ತುತ ವರ್ಷ ರಿಯಾಯಿತಿ ದರದ ಸಾಲದ ಮಿತಿಯನ್ನು ಕಡಿಮೆಗೊಳಿಸಲು ಕಾರಣ ಎಂದು ನಬಾರ್ಡ್ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ರೈತರು ಕೃಷಿ ಸಹಕಾರಿ ಚಟುವಟಿಕೆಗಳಿಗೆ ರಿಯಾಯಿತಿ ದರದ ಸಾಲದ ಮಿತಿಯನ್ನು ಹೆಚ್ಚಿಸುವಂತೆ ಬೇಡಿಕೆ ಇರಿಸಿದ್ದಾರೆ. ಆದರೆ, ರಾಜ್ಯಕ್ಕೆ 2024-25ನೇ ಸಾಲಿಗೆ ರಿಯಾಯಿತಿ ದರದ ಸಾಲದ ಮಿತಿಯನ್ನು ಕಡಿತಗೊಳಿಸಿರುವುದು ಅಲ್ಪಾವಧಿ ಕೃಷಿ ಸಹಕಾರಿ ಸಾಲದ ವಿತರಣೆ ಮೇಲೆ ಗಂಭೀರ ಪರಿಣಾಮ ಬೀರಲಿದೆ.

ಈ ಹಿನ್ನೆಲೆಯಲ್ಲಿ, ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ನಬಾರ್ಡ್ ಹಾಗೂ ಆರ್ಬಿಐಗೆ ನಿರ್ದೇಶನ ನೀಡಬೇಕು ಎಂದು ನಿಯೋಗ ಮನವಿ ಮಾಡಿತು.

ಗುಜರಾತ್ ರಾಜಸ್ಥಾನದ ಮೊತ್ತ ಕಡಿತ: ಜೋಶಿ

ನವದೆಹಲಿ: ‘ಕಾಂಗ್ರೆಸ್ ಸರ್ಕಾರದ ದುರಾಡಳಿತ ಭ್ರಷ್ಟಾಚಾರ- ಇವೆಲ್ಲವನ್ನೂ ಮರೆಮಾಚಲು ಸಿದ್ದರಾಮಯ್ಯ ಅವರು ಕೇಂದ್ರದ ವಿರುದ್ಧ ಆರೋಪ ಮಾಡುತ್ತಲೇ ಬಂದಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ನಬಾರ್ಡ್ನಿಂದ ಕರ್ನಾಟಕಕ್ಕೆ ಮಾತ್ರ ಸಮಸ್ಯೆ ಆಗಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ.

ಗುಜರಾತ್ನಲ್ಲಿ ಕೃಷಿ ಕ್ಷೇತ್ರಕ್ಕೆ ನಬಾರ್ಡ್ ಮೊತ್ತ ಕಳೆದ ಬಾರಿ ₹1800 ಕೋಟಿ ಸಾಲ ಇದ್ದುದು ಈ ಬಾರಿ ₹1070 ಕೋಟಿ ಆಗಿದೆ. ರಾಜಸ್ಥಾನದಲ್ಲಿ ಕಳೆದ ಬಾರಿ ₹4792 ಕೋಟಿ ಇತ್ತು. ಈ ಸಲ ₹2070 ಕೋಟಿಗೆ ಇಳಿದಿದೆ. ಉತ್ತರ ಪ್ರದೇಶದಲ್ಲಿ ಕಳೆದ ಬಾರಿ ₹2700 ಕೋಟಿ ಇತ್ತು. ಈ ಬಾರಿ ₹920 ಕೋಟಿ ಆಗಿದೆ’ ಎಂದರು. ‘ಎಲ್ಲ ಬ್ಯಾಂಕ್ಗಳು ಆದ್ಯತಾ ರಂಗವಾದ ಕೃಷಿಗೆ ನಿಗದಿತ ಮೊತ್ತವನ್ನು ಸಾಲವಾಗಿ ಕೊಡುತ್ತಿವೆ. ಸಹಜವಾಗಿ ನಬಾರ್ಡ್ಗೆ ರಿಸರ್ವ್ ಬ್ಯಾಂಕ್ ಕೊಡುವ ಮೊತ್ತ ಕಡಿಮೆಯಾಗುತ್ತದೆ.

ಈ ವ್ಯವಸ್ಥೆ ಗೊತ್ತಿರುವ ಸಿದ್ದರಾಮಯ್ಯನವರು ಇದನ್ನು ಮೆಚ್ಚಬೇಕಿತ್ತು. ತಳಹಂತದ ಸಾಲವು ಕರ್ನಾಟಕದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 8 ಇದ್ದದ್ದು 8.15 ಆಗಿದೆ. ಇದು ದೇಶದಾದ್ಯಂತ ನಬಾರ್ಡ್ ಹಣಕಾಸಿನ ಲಭ್ಯತೆ ಕಡಿಮೆ ಆಗಲು ಕಾರಣ’ ಎಂದು ಅವರು ವಿಶ್ಲೇಷಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.