ಮುಂಬೈ: ಛತ್ರಪತಿ ಶಿವಾಜಿ ಮಹಾರಾಜರನ್ನು ಯಾರಾದರೂ ಲೂಟಿಕೋರ ಎಂದು ಕರೆದರೆ ಸಹಿಸುವುದಿಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.

ಮರಾಠ ರಾಜ ಶಿವಾಜಿ ಮಹಾರಾಜ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಲು ಸೂರತ್‌ನಿಂದ ಸುಲಿಗೆ ಮಾಡಲು ಪ್ರಯತ್ನಿಸಿದ್ದ ಎಂದು ಎನ್‌ಸಿಪಿ(ಎಸ್‌ಪಿ) ನಾಯಕ ಜಯಂತ್ ಪಾಟೀಲ್ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದ ಬೆನ್ನಲ್ಲೇ ಫಡಣವೀಸ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ರಾಜ ಎಂದಿಗೂ ಲೂಟಿಕೋರನಲ್ಲ. ಯಾರಾದರೂ ನನ್ನ ರಾಜನನ್ನು ಲೂಟಿಕೋರ ಎಂದು ಕರೆದರೆ ಸಹಿಸುವುದಿಲ್ಲ. ಅವರು ಸಾಮಾನ್ಯ ವ್ಯಕ್ತಿಗೂ ತೊಂದರೆ ನೀಡಲಿಲ್ಲ’ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಆಗಸ್ಟ್ 26ರಂದು ನೆಲಕ್ಕುರುಳಿತ್ತು. ಈ ಘಟನೆ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.