ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನಿಂದ 190 ಕಿ.ಮೀ ದೂರದಲ್ಲಿರುವ ಕಡಲೂರಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಏಳು ಜನರು ಮೃತಪಟ್ಟಿದ್ದು, ಇತರ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಸ್ಫೋಟದಲ್ಲಿ ಕಾರ್ಖಾನೆ ಮಾಲೀಕರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದಿಂದಾಗಿ ಕುಸಿದ ಕಾಂಕ್ರಿಟ್ನ ಅವಶೇಷಗಳ ಬಳಿ ನಿಂತು ಆಘಾತಕ್ಕೊಳಗಾದ ಜನರು ಅಳುತ್ತಿರುವ ದೃಶ್ಯಗಳು ಕಂಡುಬಂದಿವೆ. ಸುತ್ತಲೂ ಮೃತದೇಹಗಳು ಬಿದ್ದಿದ್ದು, ಸ್ಥಳದಲ್ಲಿ ಅಪಾರ ಜನಸಮೂಹ ಕೂಡ ಸೇರಿದೆ.

ಕಾಟ್ಟ್ ಮನ್ನಾರ್ ಕೋಯಿಲ್ ಬಳಿ ಪರವಾನಗಿ ಪಡೆದು ನಡೆಸುತ್ತಿದ್ದ ಘಟಕವಾಗಿದೆ. ಇವರೆಲ್ಲರೂ ಕಾರ್ಮಿಕರಾಗಿದ್ದು, ಇವರು ದೇಸಿ ಬಾಂಬ್ಗಳನ್ನು ತಯಾರಿಸುತ್ತಿದ್ದರೋ ಅಥವಾಅನುಮತಿ ಪಡೆದಿದಿದ್ದಸ್ಫೋಟಕಗಳನ್ನು ಮಾತ್ರ ತಯಾರಿಸುತ್ತಿದ್ದರೋ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಕಡಲೂರು ಪೊಲೀಸ್ ಸೂಪರಿಂಟೆಂಡೆಂಟ್ ಅಭಿನವ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ ಶೇ 100ರಷ್ಟು ಉದ್ಯೋಗಿಗಳೊಂದಿಗೆ ಕೆಲಸ ಪುನರಾರಂಭಿಸಲು ರಾಜ್ಯ ಸರ್ಕಾರ ಕೈಗಾರಿಕೆಗಳಿಗೆ ಅವಕಾಶ ನೀಡಿರುವ ವೇಳೆಯಲ್ಲೇ ಈ ಅವಘಡ ಸಂಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.