ಹೈದರಾಬಾದ್: ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರರೆಡ್ಡಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯಾಗಿ ನೋಡಲು ಬಯಸಿದ್ದರು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಹೇಳಿದ್ದಾರೆ.

ರಾಜಶೇಖರ ರೆಡ್ಡಿ ಅವರ 75ನೇ ಜನ್ಮದಿನದ ಅಂಗವಾಗಿ ಇಲ್ಲಿನ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವ ಪ್ರತಿಜ್ಞೆ ಮಾಡೋಣ’ ಎಂದು ಕರೆ ನೀಡಿದ್ದಾರೆ.

‘ರಾಹುಲ್ರನ್ನು ಪ್ರಧಾನಿಯನ್ನಾಗಿ ಮಾಡುವ ಶಪಥ ಮಾಡಿ ಅದಕ್ಕಾಗಿ ಶ್ರಮಿಸುವವರೇ ರಾಜಶೇಖರ ರೆಡ್ಡಿಯವರ ನಿಜವಾದ ವಾರಸುದಾರರು. ಬದಲಾಗಿ ಅವರ (ವೈಎಸ್ಆರ್) ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವವರು ವಾರಸುದಾರರು ಎನಿಸುವುದಿಲ್ಲ’ ಎಂದು ಹೇಳುವ ಮೂಲಕ ವೈ.ಎಸ್.ಜಗನ್ ಮೋಹನ್ ರೆಡ್ಡಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೂ ಮುನ್ನ ಪಂಜಗುಟ್ಟದಲ್ಲಿರುವ ರಾಜಶೇಖರ ರೆಡ್ಡಿ ಅವರ ಪ್ರತಿಮೆಗೆ ರೇವಂತ್ ರೆಡ್ಡಿ, ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಸೇರಿದಂತೆ ಪಕ್ಷದ ಮುಖಂಡರು ಮಾಲಾರ್ಪಣೆ ಮಾಡಿದರು. ಬಳಿಕ ಪ್ರಜಾ ಭವನದಲ್ಲಿ ರಾಜಶೇಖರ ರೆಡ್ಡಿ ಅವರ ಜೀವನ ಚರಿತ್ರೆ ಕುರಿತಾದ ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಣೆ ಮಾಡಿದರು.

2004ರಿಂದ 2009ರವರೆಗೆ ಅವಿಭಜಿತ ಆಂಧ್ರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಕಾಂಗ್ರೆಸ್ ಹಿರಿಯ ನಾಯಕ ರಾಜಶೇಖರ ರೆಡ್ಡಿ ಅವರು 2009ರಲ್ಲಿ ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.