ನವದೆಹಲಿ: ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರಪ್ರದೇಶ ಸಿಎಂ ಜಗನ್ ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್ ಶರ್ಮಿಳಾ ಅವರನ್ನು ಆಂಧ್ರಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ.

ಶರ್ಮಿಳಾ ಅವರು ಕೆಲವು ದಿನಗಳ ಹಿಂದಷ್ಟೇ ನವದೆಹಲಿಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು.

ಕಳೆದ ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಶರ್ಮಿಳಾ ಅವರು ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದರು. ಕಾಂಗ್ರೆಸ್ ಸೇರಿದ ಬಳಿಕ ಶರ್ಮಿಳಾ ಸ್ಥಾಪಿಸಿದ್ದ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ನಲ್ಲಿ ವಿಲೀನ ಮಾಡಿದರು.

ವೈ.ಎಸ್.ಶರ್ಮಿಳಾ ಅವರನ್ನು ಆಂಧ್ರಪ್ರದೇಶ ರಾಜ್ಯ ಘಟಕದ ನೂತನ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂಧ್ರದ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಗಿಡುಗು ರುದ್ರರಾಜು ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.
.ಖರ್ಗೆ, ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ವೈ.ಎಸ್ ಶರ್ಮಿಳಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.