ನವದೆಹಲಿ: ತಿಹಾರ್ ಜೈಲಿನಲ್ಲಿ ನಿರಶನ ಸತ್ಯಾಗ್ರಹ ನಡೆಸುತ್ತಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್ ಅನ್ನು ಬುಧವಾರ ಆರ್ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಒತ್ತಡಲ್ಲಿ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಮಗೆ ಚಿಕಿತ್ಸೆ ನೀಡುವ ಅಗತ್ಯವಿಲ್ಲ ಎಂದು ವೈದ್ಯರಿಗೆ ಮಲಿಕ್ ಪತ್ರ ಬರೆದಿದ್ದಾನೆ ಎನ್ನಲಾಗಿದೆ.

ತಿಹಾರ್ ಜೈಲಿನಲ್ಲಿ ಯಾಸಿನ್ ಮಲಿಕ್ ನಿರಶನ: ವೈದ್ಯರಿಂದ ನಿಗಾ

‘ಮಲಿಕ್ ಕಳೆದ ಆರು ದಿನಗಳಿಂದ ನಿರಶನ ಸತ್ಯಾಗ್ರಹ ನಡೆಸುತ್ತಿದ್ದು, ಐವಿ ಮೂಲಕ ದ್ರವಾಹಾರವನ್ನು ನೀಡಲಾಗುತ್ತಿದೆ. ವೈದ್ಯರು ಮಲಿಕ್ ಆರೋಗ್ಯವನ್ನು ನಿಯಮಿತವಾಗಿ ತಪಾಸಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದರು.

ರುಬಿಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಮಲಿಕ್, ಜಮ್ಮುವಿನ ನ್ಯಾಯಾಲಯಕ್ಕೆ ಸ್ವತಃ ಹಾಜರಾಗಲು ಅನುಮತಿ ನೀಡಬೇಕು ಎಂದು ಶುಕ್ರವಾರ ಬೆಳಿಗ್ಗಿನಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾನೆ. ನ್ಯಾಯಾಲಯಕ್ಕೆ ಹಾಜರಾಗಲು ಅನುಮತಿ ನೀಡಬೇಕು ಎಂದು ಮಲಿಕ್ ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಆದರೆ, ಕೇಂದ್ರವು ಅರ್ಜಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.