ಮುಜಾಫರ್‌ಪುರ: ಬಿಹಾರದಲ್ಲಿ ಕಳ್ಳಬಟ್ಟಿ ಸಾರಾಯಿ ದುರಂತ ಮಾದರಿಯ ಮತ್ತೊಂದು ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ರಾಜ್ಯದಲ್ಲಿ ನಕಲಿ ಮದ್ಯಸೇವನೆಯಿಂದ 40ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.

‘ಮುಜಫ್ಪರ್‌ಪುರ ಜಿಲ್ಲೆಯ ಕಾಂತಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿರಸಿಯಾ ಗ್ರಾಮದಲ್ಲಿ ಇಬ್ಬರು ವ್ಯಕ್ತಿಗಳು ನಕಲಿ ಮದ್ಯಸೇವಿಸಿ ಸಾವಿಗೀಡಾಗಿದ್ದಾರೆ. ಇವರಿಬ್ಬರೂ ಮದ್ಯ ಸೇವಿಸಿ ಅಸ್ವಸ್ಥಗೊಂಡಿದ್ದರು. ಇನ್ನಿಬ್ಬರು ಅಸ್ವಸ್ಥರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಲಾಗಿದೆ’ ಎಂದು ಜಿಲ್ಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜಯಂತ್ ಕಾಂತ್ ತಿಳಿಸಿದ್ದಾರೆ.

‘ಮೃತಪಟ್ಟವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತಪಟ್ಟವರ ಹಾಗೂ ಅಸ್ವಸ್ಥಗೊಂಡಿರುವವರ ಕುಟುಂಬಗಳ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಸಂಬಂಧಿಕರ ಹೇಳಿಕೆಯ ಪ್ರಕಾರ ಇವರೆಲ್ಲರೂ ಮದ್ಯಸೇವಿಸಿದ್ದರು ಎಂದು ದೃಢಪಟ್ಟಿದೆ’ ಎಂದು ಜಯಂತ್ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.