ನವದೆಹಲಿ: ಅಲೋಪಥಿ ವಿರುದ್ಧದ ಹೇಳಿಕೆ ಹಿನ್ನೆಲೆಯಲ್ಲಿ ದಾಖಲಾಗಿರುವ ಎಫ್‌ಐಆರ್ ವಿಚಾರಣೆಯನ್ನು ತಡೆಹಿಡಿಯುವಂತೆ ಬಾಬಾ ರಾಮದೇವ್ ಅವರು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದಾರೆ.

ವೈದ್ಯರು, ಆಧುನಿಕ ವೈದ್ಯಕೀಯ ಪದ್ಧತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಐಎಂಎ ಕೆಲವು ದಿನಗಳ ಹಿಂದೆ ರಾಮದೇವ್‌ಗೆ ಮಾನನಷ್ಟ ಮೊಕದ್ದಮೆಯ ನೋಟಿಸ್ ನೀಡಿತ್ತು. 15 ದಿನಗಳಲ್ಲಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಲಾಗಿತ್ತು.

ಸಂದರ್ಶನವೊಂದರಲ್ಲಿ ಕೋವಿಡ್-19ಕ್ಕೆ ಅಲೋಪಥಿ ಔಷಧಿ ತೆಗೆದುಕೊಂಡು ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ ಎಂದು ಬಾಬಾ ರಾಮ್‌ದೇವ್ ಆರೋಪಿಸಿದ್ದರು.

ಅಲೋಪಥಿ ಒಂದು ಮೂರ್ಖ ವಿಜ್ಞಾನ ಎಂದು ಜರಿದಿದ್ದರು. ಈ ಹೇಳಿಕೆಗೆ ಸಾಮಾಜಿಕ ತಾಣಗಳಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಕೂಡ ಹೇಳಿಕೆಯನ್ನು ಹಿಂತೆಗೆದುಕೊಳ್ಳುವಂತೆ ರಾಮ್‌ದೇವ್ ಅವರಿಗೆ ಸೂಚಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.