ಮುಜಾಫರ್‌ನಗರ (ಉತ್ತರ ಪ್ರದೇಶ): ಇಲ್ಲಿನ ಗ್ರಾಮವೊಂದರಲ್ಲಿ 22 ವರ್ಷದ ಯುವತಿಯ ಮೇಲೆ ಇಬ್ಬರು ಯುವಕರು ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಅಲ್ಲದೆ ಈ ಕೃತ್ಯವನ್ನು ಯುವಕರು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಯುವತಿಯನ್ನು ಪೀಡಿಸಿದ್ದಾರೆ. ಈ ಕುರಿತು ಭೋಪಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಒದಗಿಸುವ ನೆಪದಲ್ಲಿ ಯೋಗೀಶ್ ಕುಮಾರ್ ಮತ್ತು ಬಬ್ಲು ಎಂಬುವರು ಯುವತಿಯನ್ನು ಹೊಲಕ್ಕೆ ಕರೆಸಿಕೊಂಡು ಸರದಿ ಅತ್ಯಾಚಾರ ಎಸಗಿದ್ದಾರೆ. ಇದರಲ್ಲಿ ಒಬ್ಬ ಆರೋಪಿ ತನ್ನ ಮೊಬೈಲ್‌ನಲ್ಲಿ ಈ ಕೃತ್ಯವನ್ನು ಚಿತ್ರೀಕರಿಸಿದ್ದಾನೆ.

ಮೊಬೈಲ್‌ನಿಂದ ಈ ದೃಶ್ಯಾವಳಿಯನ್ನು ಅಳಿಸುವ ನೆಪದಲ್ಲಿ ಯುವತಿಯನ್ನು ಕರೆಸಿಕೊಂಡ ಯೋಗೀಶ್ ಮತ್ತೆ ಅತ್ಯಾಚಾರ ಎಸಗಿದ್ದಾನೆ. ಬಳಿಕವೂ ಆತ ವಿಡಿಯೊ ಅನ್ನು ಅಳಿಸದೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಠಾಣಾ ಅಧಿಕಾರಿ ರಾಜ್‌ಕುಮಾರ್ ರಾಣಾ ತಿಳಿಸಿದ್ದಾರೆ.

ಯುವತಿ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಕಲಂ 376 ಮತ್ತು 506ರಡಿ ಪ್ರಕರಣ ದಾಖಲಿಸಿರುವುದಾಗಿ ಅವರು ಹೇಳಿದ್ದಾರೆ.

ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.