ಲಖನೌ: ಉತ್ತರಪ್ರದೇಶದ ಮೀರತ್ನಲ್ಲಿ ಯುವಕನ ಮೇಲೆ ಭಾನುವಾರ ತೀವ್ರ ಹಲ್ಲೆ ನಡೆಸಿ, ಆತನ ಮುಖದ ಮೇಲೆ ಮೂತ್ರ ವಿಸರ್ಜಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಲ್ಲದೆ, ತಲೆ ಮರೆಸಿಕೊಂಡಿರುವ ಇನ್ನೂ ನಾಲ್ವರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದೂ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಸಂಬಂಧಿಕರೊಬ್ಬರ ಮನೆಯಿಂದ ವಾಪಸ್ ತನ್ನ ಮನೆಗೆ ಬರುತ್ತಿದ್ದ ಸಂತ್ರಸ್ತನನ್ನು ಅಡ್ಡಗಟ್ಟಿದ್ದ ಏಳು ಮಂದಿ, ಮನಸೋ ಇಚ್ಛೆ ಥಳಿಸಿದ್ದರು. ಜೊತೆಗೆ ಆತನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು. ಸಂತ್ರಸ್ತನಿಗೆ ಪರಿಚಯವಿರುವ ಕೆಲವರು ಇದರಲ್ಲಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸಂತ್ರಸ್ತನ ಕುಟುಂಬಸ್ಥರು ನೀಡಿದ ದೂರಿನ ಮೇಲೆ ಒಬ್ಬ ಆರೋಪಿಯನ್ನು ಬಂಧಿಸಲಾಗಿತ್ತು. ಈ ಎಫ್ಐಆರ್ನಲ್ಲಿ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ವಿವರ ಇರಲಿಲ್ಲ. ಆದರೆ, ಈ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊದಿಂದಾಗಿ ಆರೋಪಿಗಳು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವುದು ಗೊತ್ತಾಗಿದೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.