ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯುವಕರು RSS ಸಿದ್ಧಾಂತಕ್ಕೆ ಆಕರ್ಷಿತರಾಗಿ ಸೇರುತ್ತಿದ್ದಾರೆ: ಸುನಿಲ್ ಅಂಬೇಕರ್

Published 14 ಜುಲೈ 2024, 11:31 IST
Last Updated 14 ಜುಲೈ 2024, 11:31 IST
ಅಕ್ಷರ ಗಾತ್ರ

ರಾಂಚಿ: ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಆರ್‌.ಎಸ್‌.ಎಸ್‌ ಸಿದ್ಧಾಂತಕ್ಕೆ ಆಕರ್ಷಿತರಾಗುತ್ತಿದ್ದು, ಪ್ರತಿ ವರ್ಷವು ಹಲವು ಯುವಕರು ಸಂಘದ ಭಾಗವಾಗುತ್ತಿದ್ದಾರೆ ಎಂದು ಆರ್‌.ಎಸ್‌.ಎಸ್‌ನ ಪ್ರಚಾರ ವಿಭಾಗದ ರಾಷ್ಟ್ರೀಯ ಮುಖ್ಯಸ್ಥ ಸುನಿಲ್ ಅಂಬೇಕರ್ ಭಾನುವಾರ ಹೇಳಿದ್ದಾರೆ.

'Join RSS' ವೇದಿಕೆ ಮುಖಾಂತರ ವರ್ಷಕ್ಕೆ ಸುಮಾರು ಒಂದು ಲಕ್ಷ ಯುವಕರು ಸಂಘಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಂಚಿಯಲ್ಲಿ ನಡೆದ ಪ್ರಾಂತ ಪ್ರಚಾರಕರ ಸಭೆ ಅಂತ್ಯವಾದ ಬಳಿಕ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

ಈ ವರ್ಷ ಜೂನ್‌ವರೆಗೆ ಒಟ್ಟು 66,529 ಮಂದಿ ಆರ್‌.ಎಸ್‌.ಎಸ್‌ಗೆ ಸೇರ್ಪಡೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಂಘಟನೆ ವಿಸ್ತರಣೆ ಹಾಗೂ ಮುಂದಿನ ವರ್ಷ ನಡೆಯಲಿರುವ ಶತಮಾನೋತ್ಸವ ಆಚರಣೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ಮತಾಂತರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೆಲವರು ಈ ಕೃತ್ಯಕ್ಕೆ ನ್ಯಾಯಸಮ್ಮತವಲ್ಲದ ಮಾರ್ಗ ಬಳಸುತ್ತಿದ್ದಾರೆ. ಇದು ಸರಿಯಲ್ಲ. ಇದನ್ನು ತಡೆಯಲು ಕಾನೂನು ಇದೆ. ಎಲ್ಲರೂ ಇದನ್ನು ಪಾಲಿಸಬೇಕು. ಆರ್.ಎಸ್‌.ಎಸ್‌ ಮತಾಂತರಕ್ಕೆ ವಿರುದ್ಧವಾಗಿದೆ’ ಎಂದು ಹೇಳಿದ್ದಾರೆ.

ರಾಂಚಿಯಲ್ಲಿ ನಡೆದ ಸಭೆಯಲ್ಲಿ ಆರ್‌.ಎಸ್‌.ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌, ಪ್ರಧಾನ ಕಾರ್ಯದರ್ಶಿ ದತ್ತಾತ್ರೆಯ ಹೊಸಬಾಳೆ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಎಲ್ಲಾ ಪ್ರಾಂತ ಪ್ರಚಾರಕರು ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT