ಅಮರಾವತಿ: ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್ಆರ್‌ಸಿಪಿ ಮುಖ್ಯಸ್ಥ ವೈ.ಎಸ್.ಜಗನ್‌ಮೋಹನ್ ರೆಡ್ಡಿ ಶನಿವಾರ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಕಲ್ಯಾಣ ಪಿಂಚಣಿಯನ್ನು ₹3500ಕ್ಕೆ ಏರಿಸುವುದು, ವಿಶಾಖಪಟ್ಟಣವನ್ನು ಕಾರ್ಯಾಂಗ ರಾಜಧಾನಿಯನ್ನಾಗಿ ಮಾಡುವುದು ಸೇರಿದಂತೆ ಮತದಾರರಿಗೆ ಹಲವು ಭರವಸೆಗಳನ್ನು ನೀಡಿದ್ದಾರೆ.

ಅಮರಾವತಿಯನ್ನು ಶಾಸಕಾಂಗ ರಾಜಧಾನಿಯನ್ನಾಗಿ, ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸುವುದಾಗಿ ಜಗನ್ ಹೇಳಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಜಾರಿಗೆ ತಂದಿರುವ ಬಹುತೇಕ ಎಲ್ಲ ಯೋಜನೆಗಳನ್ನು ಮುಂದುವರಿಸುವುದಾಗಿ ಘೋಷಿಸಿರುವ ಜಗನ್, ಅಮ್ಮ ವೊಡಿಯಂಥ ಕೆಲವು ಯೋಜನೆಗಳಿಗೆ ಹೆಚ್ಚಿನ ಹಣ ಮೀಸಲಿಡುವುದಾಗಿ ತಿಳಿಸಿದ್ದಾರೆ.

ರಾಜಕೀಯ ಪಕ್ಷವೊಂದರ ಪ್ರಣಾಳಿಕೆಗೆ ತಮ್ಮ ಸರ್ಕಾರದ ಆಡಳಿತದಲ್ಲಿ ಮಾತ್ರವೇ ನಿಜವಾದ ಅರ್ಥ ಪ್ರಾಪ್ತವಾಗಿದ್ದು, ತಾವು ಪ್ರಣಾಳಿಕೆಯನ್ನು ಪವಿತ್ರ ಬೈಬಲ್, ಕುರಾನ್ ಮತ್ತು ಭಗವದ್ಗೀತೆಯಂತೆ ಪರಿಗಣಿಸುವುದಾಗಿ ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಮೇ 13ರಂದು ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.