ನಾಗಪುರ: ನಗರದಲ್ಲಿ ಇಂದು ಸಂಜೆ ನಡೆಯಲಿರುವ ಕಾರ್ಯಕ್ರಮವೊಂದು ಇಡೀ ದೇಶದ ಗಮನ ಸೆಳೆದಿದೆ. ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣ ಹೇಗಿರಬಹುದು ಎಂಬ ಚರ್ಚೆಗಳ ಜೊತೆಜೊತೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುತ್ಸದಿಯ ನಿರ್ಧಾರದ ಪರ–ವಿರುದ್ಧ ಚರ್ಚೆಗಳೂ ಕಾವೇರಿವೆ.

ಕಾಂಗ್ರೆಸ್‌ನ ವರಿಷ್ಠ ನಾಯಕರು ಮತ್ತು ಪುತ್ರಿಯ ಟೀಕೆಯ ನಡುವೆಯೂ ಆರ್‌ಎಸ್‌ಎಸ್‌ನ ತೃತೀಯ ವರ್ಷ ಸಂಘ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಭಾಷಣ ಮಾಡಲು ಪ್ರಣಬ್ ಮುಖರ್ಜಿ ಒಪ್ಪಿಗೆ ಸೂಚಿಸಿದ್ದಾರೆ.

ಪ್ರಣಬ್ ಮುಖರ್ಜಿ ಅವರನ್ನು ಆಹ್ವಾನಿಸಿರುವ ಕ್ರಮವನ್ನು ಆರ್‌ಎಸ್‌ಎಸ್ ಬಲವಾಗಿ ಸಮರ್ಥಿಸಿಕೊಂಡಿದೆ. ಮಹಾತ್ಮಾ ಗಾಂಧಿ ಮತ್ತು ಜಯಪ್ರಕಾಶ್ ನಾರಾಯಣ್ ಸಹ ಸಂಘದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನಮ್ಮ ಕೆಲಸ ಮೆಚ್ಚಿ ನೆಹರು ಅವರು 1963ರ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಪಾಲ್ಗೊಳ್ಳಲು ಅವಕಾಶ ಕೊಟ್ಟಿದ್ದರು ಎಂದು ಹೇಳಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.