ಲಖನೌ: ಉತ್ತರ ಪ್ರದೇಶದ ಹಾಥರಸ್ ಜಿಲ್ಲೆಯ ಫೂಲರಾಯ್ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ‘ಸತ್ಸಂಗ’ದ ವೇಳೆ ಸಂಭವಿಸಿದ ಕಾಲ್ತುಳಿತದಿಂದಾಗಿ ಕನಿಷ್ಠ 127 ಜನರು ಮೃತರಾಗಿದ್ದು ಇವರಲ್ಲಿ ಮಹಿಳೆಯರೇ ಹೆಚ್ಚು ಎಂದು ವರದಿಯಾಗಿದೆ.

ಘಟನೆ ಕುರಿತು ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ.

ಮೃತರ ಪೈಕಿ 112 ಜನರು ಮಹಿಳೆಯರೇ ಆಗಿದ್ದಾರೆ. ಇವರಲ್ಲಿ 7 ಮಕ್ಕಳು, 8 ಜನ ಪುರುಷರು ಸೇರಿದ್ದಾರೆ. ಈವರೆಗೂ 80 ಜನರ ಗುರುತು ಪತ್ತೆಯಾಗಿದ್ದು ಮೃತದೇಹಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
.ಹಾಥರಸ್ ಕಾಲ್ತುಳಿತ ಪ್ರಕರಣ: ನ್ಯಾಯಾಂಗ ತನಿಖೆಗೆ ಸಿಎಂ ಯೋಗಿ ಆದೇಶ.ಹಾಥರಸ್ ಕಾಲ್ತುಳಿತ ದುರಂತ: ಸಂತಾಪ ತಿಳಿಸಿದ ರಷ್ಯಾ ಅಧ್ಯಕ್ಷ ಪುಟಿನ್.
ಹಾಥರಸ್ ಜಿಲ್ಲೆಯ ಸಿಕಂದಾರಾವ್ ಪ್ರದೇಶದ ಫೂಲರಾಯ್ ಗ್ರಾಮದಲ್ಲಿ ಧಾರ್ಮಿಕ ಸಭೆಯೊಂದರಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 127 ಜನರು ಮೃತಪಟ್ಟಿದ್ದಾರೆ 80 ಜನರು ಗಾಯಗೊಂಡಿದ್ದಾರೆ.

‘ಸತ್ಸಂಗ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸರ್ಕಾರ್ ವಿಶ್ವಹರಿ ಭೋಲೆಬಾಬಾ ಅವರ ಬೆಂಗಾವಲು ವಾಹನಗಳ ಸಂಚಾರಕ್ಕಾಗಿ ಒಂದು ದ್ವಾರವನ್ನು ಆಯೋಜಕರು ಮುಚ್ಚಿದ್ದರಿಂದ ಮತ್ತೊಂದು ದ್ವಾರದ ಮೇಲೆ ಒತ್ತಡ ಹೆಚ್ಚಾಯಿತು. ಜತೆಗೆ, ಭೋಲೆಬಾಬಾ ಅವರಿದ್ದ ವಾಹನದ ಹಿಂದೆ ಭಕ್ತರು ಓಡುತ್ತಿದ್ದರು. ಕೆಲವರು ಸ್ಥಳದಿಂದ ಮಣ್ಣು ಸಂಗ್ರಹಿಸಲು ಮುಗಿಬಿದ್ದಿದ್ದು ಕೂಡ ಕಾಲ್ತುಳಿತಕ್ಕೆ ಕಾರಣವಾಯಿತು ಸರ್ಕಾರ ಅಧಿಕಾರಿಗಳು ಹೇಳಿದ್ದಾರೆ.

‘ಸತ್ಸಂಗ’ ನಡೆಸಲು ಅನುಮತಿ ಕೋರಿ ಕಾರ್ಯಕ್ರಮದ ಆಯೋಜಕರು ಸಲ್ಲಿಸಿದ ಅರ್ಜಿಯಲ್ಲಿ 80 ಸಾವಿರ ಭಕ್ತರು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ. ಇದು ಆಯೋಜಕರ ಕಡೆಯಿಂದ ಆಗಿರುವ ಲೋಪ ಎಂದು ಸಿಂಗ್ ವಿವರಿಸಿದ್ದಾರೆ.
.ಹಾಥರಸ್ ಕಾಲ್ತುಳಿತಕ್ಕೆ ಜನದಟ್ಟಣೆಯೇ ಪ್ರಮುಖ ಕಾರಣ: ಯುಪಿ ಮುಖ್ಯ ಕಾರ್ಯದರ್ಶಿ.ಹಾಥರಸ್ ಕಾಲ್ತುಳಿತ ದುರಂತ; ಆಸ್ಪತ್ರೆ ಆವರಣದಲ್ಲಿ ಶವಗಳ ರಾಶಿ, ಸಂಬಂಧಿಕರ ಆಕ್ರಂದನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.