ಭೋಪಾಲ್: ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಸ್ಪರ್ಧಿಸಲಿರುವ ಸಂಭಾವ್ಯ ಕ್ಷೇತ್ರದ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಬಿರುಸಿನ ಚರ್ಚೆ ನಡೆದಿದೆ.

ದಿಗ್ವಿಜಯ್ ಅವರು ಯಾವುದಾದರೂ ಕಠಿಣ ಸ್ಪರ್ಧೆ ಇರುವ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಕಾರ್ಯಕರ್ತರಿಗೆ ಸಕಾರಾತ್ಮಕ ಸಂದೇಶವನ್ನು ನೀಡಬೇಕು ಎಂಬುದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ಬಯಕೆ.

ಈ ಸವಾಲು ಒಪ್ಪಿಕೊಳ್ಳುವ ಇಚ್ಛೆಯನ್ನು ದಿಗ್ವಿಜಯ್ ವ್ಯಕ್ತಪಡಿಸಿದ್ದಾರೆ. 1989ರಿಂದಲೂ ಸತತವಾಗಿ ಕಾಂಗ್ರೆಸ್ಗೆ ಸೋಲುಣಿಸಿರುವ ಇಂದೋರ್, ಭೋಪಾಲ್ ಹಾಗೂ ವಿದಿಶಾ ಕ್ಷೇತ್ರಗಳ ಪೈಕಿ ಒಂದರಲ್ಲಿ ದಿಗ್ವಿಜಯ್ ಸಾಮರ್ಥ್ಯ ಪರೀಕ್ಷೆಗೆ ಒಳಪಡಲಿದೆ.

ಪಕ್ಷ 30 ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲದ ಮೂರು ಕ್ಷೇತ್ರಗಳ ಪೈಕಿ ಯಾವುದಾದರೂ ಒಂದರಿಂದ ದಿಗ್ವಿಜಯ್ ಸ್ಪರ್ಧಿಸಲಿ ಎಂದು ಕಮಲನಾಥ್ ಅಭಿಪ್ರಾಯಪಟ್ಟಿದ್ದರು. ಮುಖ್ಯಮಂತ್ರಿಯವರ ಮಾತನ್ನು ಸಿಂಧಿಯಾ ಅನುಮೋದಿಸಿದ್ದಾರೆ. ಅಂತಿಮವಾಗಿ ಯಾರು ಎಲ್ಲಿಂದ ಸ್ಪರ್ಧಿಸಬೇಕು ಎಂದು ಪಕ್ಷ ನಿರ್ಧರಿಸುತ್ತದೆ ಎಂದು ಸಿಂಧಿಯಾ ಹೇಳಿದ್ದಾರೆ.

*ಪಕ್ಷ ಸೂಚಿಸುವ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಸಿದ್ಧ
–ದಿಗ್ವಿಜಯ ಸಿಂಗ್, ಕಾಂಗ್ರೆಸ್ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.