ನವದೆಹಲಿ: ಆರ್ಎಸ್ಎಸ್ ಮತ್ತು ಬಿಜೆಪಿ ಕೇರಳದಲ್ಲಿ ಹಿಂಸೆಯನ್ನು ಹರಡುತ್ತಿದ್ದು, ಈ ಕೃತ್ಯವನ್ನೇ ಮುಂದುವರಿಸಿದಲ್ಲಿ ಬಿಜೆಪಿಯು ರಾಜ್ಯದಲ್ಲಿ ಒಂದು ಸ್ಥಾನವನ್ನೂ ಗೆಲ್ಲದು ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದರು.

ಕೇರಳದಲ್ಲಿ ಬಿಜೆಪಿಯು ಕಳೆದ ಎರಡು ವಾರಗಳಿಂದ ನಡೆಸಿದ್ದ ‘ಜನ ರಕ್ಷಾ ಯಾತ್ರೆ’ಗೆ ಪ್ರತಿಯಾಗಿ ಇಲ್ಲಿ ಬಿಜೆಪಿ ಪ್ರಧಾನ ಕಚೇರಿ ವರೆಗೆ ಸಿಪಿಐ(ಎಂ) ನಡೆಸಿದ ಯಾತ್ರೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

‘ಬಿಜೆಪಿಯು ಕೇರಳದಲ್ಲಿ ಹಿಂಸೆ ಹೆಚ್ಚಿಸಿದರೆ ರಾಜ್ಯದಲ್ಲಿ ಒಬ್ಬನೇ ಒಬ್ಬ ಶಾಸಕನನ್ನು ಹೊಂದುವುದೂ ಅದಕ್ಕೆ ಸಾಧ್ಯವಾಗದು. ಬಿಜೆಪಿಯು ಹಿಂಸೆ ಮತ್ತು ಬೆದರಿಕೆಯ ಮೂಲಕ ರಾಜ್ಯದಲ್ಲಿ ರಾಜಕೀಯ ಅಸ್ತಿತ್ವ ಹೆಚ್ಚಿಸಿಕೊಳ್ಳಲು ಹವಣಿಸುತ್ತಿದೆ’ ಎಂದು ಅವರು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.