ನವದೆಹಲಿ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಜಾತಿ, ಧರ್ಮ ಅಥವಾ ಲಿಂಗ ತಾರತಮ್ಯ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎನಿಸಿಕೊಳ್ಳುವ ದಿನಗಳು ದೂರವಿಲ್ಲ.

ಅನೇಕ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಇಂಥ ತಾರತಮ್ಯಕ್ಕೆ ಒಳಗಾದ ದೂರುಗಳು ಬಂದ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು, ತಾಂತ್ರಿಕ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿನ `ಕಾನೂನು ಬಾಹಿರ ಕ್ರಮ ತಡೆ ಮಸೂದೆ~ಗೆ ತಿದ್ದುಪಡಿ ತರಲು ಮುಂದಾಗಿದೆ.

`2010ರ ಈ ಮಸೂದೆಯು ಜಾತಿ, ಧರ್ಮ ಅಥವಾ ಲಿಂಗ ತಾರತಮ್ಯವನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುತ್ತದೆ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ದಂಡ ವಿಧಿಸಲಾಗುತ್ತದೆ. ಆದರೆ ಶಿಕ್ಷೆಯ ಪ್ರಮಾಣವನ್ನು ಇನ್ನೂ ನಿರ್ಧರಿಸಿಲ್ಲ~ ಎಂದು ಸಚಿವಾಲಯದ ಮೂಲಗಳು `ಪ್ರಜಾವಾಣಿ~ಗೆ ತಿಳಿಸಿವೆ.

ಶಿಕ್ಷಣ ಸಂಸ್ಥೆಗಳ ಇಂಥ ಕ್ರಮಗಳಿಗೆ ಲಗಾಮು ಹಾಕಲು ಸಚಿವಾಲಯವು ರಾಷ್ಟ್ರೀಯ ಮಾನ್ಯತಾ ನಿಯಂತ್ರಣ ಪ್ರಾಧಿಕಾರ ಮಸೂದೆಗೂ ತಿದ್ದುಪಡಿ ತರಲು ನಿರ್ಧರಿಸಿದೆ.

ಉದ್ದೇಶಿತ ಕಾಯ್ದೆಯ ಅನ್ವಯ, ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡುವ ಮುನ್ನ `ಸಮಾನತೆ ಹಾಗೂ ಸಮಗ್ರತೆ ವಿಷಯ~ದಲ್ಲಿ ಅವುಗಳ ಧೋರಣೆಯನ್ನು ಪರಿಶೀಲಿಸುವ ಅಧಿಕಾರ ರಾಷ್ಟ್ರೀಯ ಪ್ರಾಧಿಕಾರಕ್ಕೆ ಇರುತ್ತದೆ ಎಂದು ಮೂಲಗಳು ಹೇಳಿವೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯದ ಕಾರಣದಿಂದ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಚಿವಾಲಯವು ಈ ಎರಡೂ ಕಾಯ್ದೆಗಳಿಗೆ ತಿದ್ದುಪಡಿ ತರಲು ಮುಂದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.