ಭೋಪಾಲ್/ಭಿಂಡ್: ಖಾಸಗಿ ವಾಹಿನಿಯ ಪತ್ರಕರ್ತನ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡುವುದಾಗಿ ಮಧ್ಯಪ್ರದೇಶ ಸರ್ಕಾರ ತಿಳಿಸಿದೆ.

ಮರಳು ಗಣಿಗಾರಿಕೆ ಅಕ್ರಮ ಕುರಿತು ಮಾರುವೇಷದ ಕಾರ್ಯಾಚರಣೆ ನಡೆಸಿ ವರದಿ ಮಾಡಿದ್ದ ಭಿಂಡ್‌ನ ವರದಿಗಾರ ಸಂದೀಪ್ ಶರ್ಮಾ ಅವರ ಮೇಲೆ ಸೋಮವಾರ ಲಾರಿ ಹರಿದ ಪರಿಣಾಮ ಮೃತಪಟ್ಟಿದ್ದರು. ಲಾರಿ ಚಾಲಕನನ್ನು ಅದೇ ದಿನ ರಾತ್ರಿ ಬಂಧಿಸಲಾಗಿದೆ.

‘ಅಫಘಾತದ ಬಳಿಕ ಪರಾರಿಯಾಗಿದ್ದ ಲಾರಿ ಚಾಲಕ ರನ್ವೀರ್ ಯಾದವ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಭೀಂಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಖರೆ ತಿಳಿಸಿದ್ದಾರೆ.

ಮಾರುವೇಷದ ಕಾರ್ಯಾಚರಣೆ ಬಳಿಕ ತಮಗೆ ಜೀವ ಬೆದರಿಕೆ ಇದೆ ಎಂದು ಜಿಲ್ಲಾಡಳಿತಕ್ಕೆ ಹಾಗೂ ಮಧ್ಯಪ್ರದೇಶದ ಪೊಲೀಸ್ ಮಹಾನಿರ್ದೇಶಕರು ಮತ್ತು ಮಾನವಹಕ್ಕುಗಳ ಆಯೋಗಕ್ಕೆ ಈಚೆಗೆ ಸಂದೀಪ್ ದೂರು ನೀಡಿದ್ದರು. ಶರ್ಮಾ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕಾಂಗ್ರೆಸ್ ಆಗ್ರಹಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.