ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಾಲೆಗಾಂವ್ ಸ್ಫೋಟ ಪ್ರಕರಣ: ಪುರೋಹಿತ್ ಅರ್ಜಿ ವಜಾ

ಫಾಲೋ ಮಾಡಿ
Comments

ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿಗಳಾದ ಲೆ.ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್, ಪ್ರಜ್ಞಾ ಸಿಂಗ್ ಹಾಗೂ ಇತರೆ ಆರೋಪಿಗಳ ವಿರುದ್ಧ ಅಕ್ರಮ ಚಟುವಟಿಕೆ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ವಿಚಾರಣೆ ನಡೆಸಲು ಅನುಮತಿ ನೀಡಿ ಎನ್ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಯುಎಪಿಎ ಅಡಿಯಲ್ಲಿವಿಚಾರಣೆ ನಡೆಸುವುದನ್ನು ಪ್ರಶ್ನಿಸಿ ಪುರೋಹಿತ್ ಹಾಗೂ ಇತರೆ ಆರೋಪಿಗಳು ಅರ್ಜಿಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಲು ನ್ಯಾಯಮೂರ್ತಿ ವಿನೋದ್ ಪಡಲ್ಕರ್ನಿರಾಕರಿಸಿದ್ದು, ಪ್ರಕರಣದಮುಂದಿನ ವಿಚಾರಣೆಯನ್ನು ಇದೇ 26ಕ್ಕೆ ನಿಗದಿಪಡಿಸಿದ್ದಾರೆ. ತಮ್ಮ ವಿರುದ್ಧ ವಿಚಾರಣಾಧೀನ ನ್ಯಾಯಾಲಯ ಆರೋಪಪಟ್ಟಿ ಸಲ್ಲಿಸುವುದನ್ನು ತಡೆಯಬೇಕೆಂದು ಪುರೋಹಿತ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಕಳೆದ ತಿಂಗಳು ತಿರಸ್ಕರಿಸಿತ್ತು.

2008ರ ಸೆ.9ರಂದು ನಾಸಿಕ್ ಸಮೀಪದ ಮಾಲೆಗಾಂವ್‌ನಲ್ಲಿ ನಡೆದ ಸ್ಫೋಟದಲ್ಲಿ 6 ಮಂದಿ ಮೃತಪಟ್ಟು, 101 ಜನರು ಗಾಯಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT