ನವದೆಹಲಿ: ರಸ್ತೆಯಲ್ಲಿ ಕಾರಿಗೆ ಸೇನಾ ವಾಹನ ಡಿಕ್ಕಿ ಹೊಡೆಯಿತು ಎಂದು ಆರೋಪಿಸಿದ 44 ವರ್ಷದ ಸ್ಮೃತಿ ಕರ್ಲಾ ಯೋಧನ ಕೆನ್ನೆಗೆ ಬಾರಿಸಿದ್ದರು. ಘಟನೆಯ ವಿಡಿಯೊವನ್ನು ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.

ಈ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಹಿಳೆಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಘಟನೆಗೆ ಸಂಬಂಧಿಸಿದಂತೆ ರಸ್ತೆಯಲ್ಲಿ ಸಂಚರಿಸುತ್ತಿರುವಾಗ ಸ್ಮೃತಿ ಕರ್ಲಾ ಅವರೆ ಏಕಾಏಕಿ ಬ್ರೇಕ್ ಹಾಕಿದ್ದ ಪರಿಣಾಮ ಡಿಕ್ಕಿ ಸಂಭವಿಸಿತ್ತು ಎಂದು ಹಲ್ಲೆಗೊಳ್ಳಗಾದ ಯೋಧ ದೆಹಲಿ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ದೆಹಲಿ ಪೊಲೀಸರು ಸ್ಮೃತಿ ಕರ್ಲಾ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.