ಚಿಂತಾಮಣಿ (ಚಿಕ್ಕಬಳ್ಳಾಪುರ): ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢ ಮತ್ತು ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳಿಗೆ ‘ಆಧಾರ್’ ಸಂಖ್ಯೆಯ ಮಾದರಿಯಲ್ಲಿ 12 ಅಂಕಿಯ ‘ಅಪಾರ್’ ವಿಶಿಷ್ಟ ಗುರುತಿನ ಚೀಟಿ ವಿತರಿಸುವ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯದ ರಾಷ್ಟ್ರೀಯ ಶಿಕ್ಷಣ ನೀತಿ 2020 (ಎನ್ಇಪಿ) ಯೋಜನೆ ಅಡಿ ವಿದ್ಯಾರ್ಥಿಗಳಿಗೆ ದೇಶದಾದ್ಯಂತ ಏಕರೂಪದ ಗುರುತಿನ ಚೀಟಿ ನೀಡಲು ‘ಒಂದು ದೇಶ, ಏಕರೂಪದ ವಿದ್ಯಾರ್ಥಿ ಗುರುತಿನ ಚೀಟಿ’ ಶಿಫಾರಸು ಮಾಡಲಾಗಿತ್ತು. ಅದರಂತೆ ಎಲ್ಲಾ ವಿದ್ಯಾರ್ಥಿಗಳಿಗೂ ‘ಅಪಾರ್’ ವಿಶಿಷ್ಟ ಗುರುತಿನ ಚೀಟಿ ನೀಡಲಾಗುತ್ತಿದೆ.

ಈಗಾಗಲೇ ರಾಜ್ಯ ಪಠ್ಯಕ್ರಮದ ಶಾಲೆಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಎಸ್ಟಿಎಸ್ (ಸ್ಟೂಡೆಂಟ್ ಟ್ರ್ಯಾಕಿಂಗ್ ಸಿಸ್ಟಮ್) ಗುರುತಿನ ಚೀಟಿ ಮತ್ತು ಕೇಂದ್ರ ಸರ್ಕಾರದ ಪಿಇಎನ್ ನಂಬರ್ (ಪರ್ಮನೆಂಟ್ ಎಜ್ಯುಕೇಷನ್ ನಂಬರ್) ಚಾಲ್ತಿಯಲ್ಲಿ ಇದೆ.

ಅಪಾರ್ ಗುರುತಿನ ಚೀಟಿಗೆ ವಿದ್ಯಾರ್ಥಿಗಳ ಹೆಸರು ನೋಂದಣಿಗೂ ಮುಂಚೆ ಪೋಷಕರ ಒಪ್ಪಿಗೆ ಕಡ್ಡಾಯ. ಪೋಷಕರ ಆಧಾರ್, ಚುನಾವಣಾ ಆಯೋಗ ನೀಡಿದ ವೋಟರ್ಸ್ ಐ.ಡಿ, ಚಾಲನಾ ಪರವಾನಗಿ ನಂಬರ್(ಡ್ರೈವಿಂಗ್ ಲೈಸನ್ಸ್) ಲಿಂಕ್ ಮಾಡಿ ವಿದ್ಯಾರ್ಥಿಗಳ ಐ.ಡಿ ಸೃಷ್ಟಿಸಲಾಗುತ್ತದೆ.

ವಿದ್ಯಾರ್ಥಿಗಳ ಹೆಸರು ನೋಂದಾಯಿ ಸಲು ಶಿಕ್ಷಣ ಇಲಾಖೆ ಆದೇಶ ಹೊರಡಿ ಸಿದ್ದು, ಮುಖ್ಯ ಶಿಕ್ಷಕರು ಪೋಷಕರ ಸಭೆ ಕರೆದು ಅವರ ಒಪ್ಪಿಗೆ ಪಡೆಯುವಂತೆ ಸೂಚಿಸಿದೆ. ಈಗಾಗಲೇ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪೋಷಕರ ಒಪ್ಪಿಗೆ ಪಡೆಯುವ ಪ್ರಕ್ರಿಯೆ ಆರಂಭಗೊಂಡಿದೆ.

ಏನಿದು ಅಪಾರ್?

‘ಅಪಾರ್’ ಎಂದರೆ ಸ್ವಯಂಚಾಲಿತ ಶಾಶ್ವತ ಶೈಕ್ಷಣಿಕ ಖಾತೆ ನೋಂದಣಿ (APAAR–Automatic Permanent Academic Account Registry) ಸಂಕ್ಷಿಪ್ತ ರೂಪ.

ಆಧಾರ್ ಕಾರ್ಡ್ ಪರಿಕಲ್ಪನೆಯೇ ಇದಕ್ಕೆ ಪ್ರೇರಣೆ. ಆಧಾರ್ ಮಾದರಿಯಲ್ಲಿಯೇ ವಿದ್ಯಾರ್ಥಿಗಳಿಗೂ 12 ಅಂಕಿಗಳ ವಿಶಿಷ್ಟ ಗುರುತಿನ ಗುರುತಿನ ಚೀಟಿ ನೀಡಲಾಗುವುದು. ಇದು ವಿದ್ಯಾರ್ಥಿ ಜೀವಮಾನದ ಗುರುತಿನ ಸಂಖ್ಯೆಯಾಗಿರುತ್ತದೆ.

ವಿದ್ಯಾರ್ಥಿಯ ಶೈಕ್ಷಣಿಕ ವಿವರ ಮತ್ತು ಸಾಧನೆಗಳನ್ನು ಟ್ರ್ಯಾಕ್ ಮಾಡಲು ಮತ್ತು ಒಂದು ಶಾಲೆಯಿಂದ ಮತ್ತೊಂದು ಶಾಲೆಗೆ ವರ್ಗಾವಣೆ ಪ್ರಕ್ರಿಯೆಯನ್ನೂ ಸುಲಭಗೊಳಿಸುತ್ತದೆ ..
ಶ್ರೀಧರ್ ಹಿರೇಮಠ, ಶಿಕ್ಷಕ, ಚಿಂತಾಮಣಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.