ಕೊಳ್ಳೇಗಾಲ (ಚಾಮರಾಜನಗರ): ಕಾಂಗ್ರೆಸ್ನಲ್ಲಿರಾಜೀನಾಮೆ ನೀಡಲು ಸಿದ್ಧರಿರುವ 22 ಶಾಸಕರು ಇದ್ದಾರೆ. ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಮೊದಲ ಹಂತದಲ್ಲಿ ಐದು ಮಂದಿಯ ರಾಜೀನಾಮೆ ಕೊಡಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಉಮೇಶ್ ಕತ್ತಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ಸಭೆ ಸೇರಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಕತ್ತಿಯವರು ನನ್ನ ಸ್ನೇಹಿತರು. ಅವರು ಮನೆಯಲ್ಲಿ ನಡೆದ ಪೂಜೆಯಲ್ಲಿ ಶಾಸಕರು ಭಾಗವಹಿಸಿದ್ದಾರೆ ಎಂಬ ಮಾಹಿತಿ ನನಗೆ ಸಿಕ್ಕಿದೆ. ಯಡಿಯೂರಪ್ಪ ಸರ್ಕಾರ ಇನ್ನೂ ಮೂರು ವರ್ಷ ಅಧಿಕಾರ ನಡೆಸಲಿದೆ. ಆಮೇಲೆಯೂ ಬಿಜೆಪಿ ಆಡಳಿತಕ್ಕೆ ಬರಲಿದೆ. ಜೀವ ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ' ಎಂದರು.

ಕೆಲವು ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ ಎಂಬ ಸುದ್ದಿ ಇದೆಯಲ್ಲ ಎಂದು ಕೇಳಿದ್ದಕ್ಕೆ, 'ಅವರೆಲ್ಲ ಏಳೆಂಟು ಬಾರಿ ಶಾಸಕರಾಗಿದ್ದಾರೆ. ಮುಳುಗುತ್ತಿರುವ ಕಾಂಗ್ರೆಸ್ ಸೇರುವಷ್ಟು ಮೂರ್ಖರಲ್ಲ' ಎಂದರು.

'ನಾನು ಯಡಿಯೂರಪ್ಪ ಪರ. ಹೈಕಮಾಂಡ್ ಒಪ್ಪಿಗೆ ಸೂಚಿಸಿದರೆ ಇನ್ನೂ ಐವರು ಕಾಂಗ್ರೆಸ್ ನಿಂದ ರಾಜೀನಾಮೆ ಕೊಡಿಸುತ್ತೇನೆ' ಎಂದರು.

ಮಹೇಶ್ ಕಾರಣೀಭೂತರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನಾನು ಮಾತ್ರ ಅಲ್ಲ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರೂ ಕಾರಣಿಭೂತರು. ಅವರಿಗೆ ₹2000 ಕೋಟಿ ಕೊಟ್ರೂ ಕಡಿಮೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.