ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಜಯನಗರ ವಿಧಾನ ಸಭೆ ಕ್ಷೇತ್ರ ಹೊರತುಪಡಿಸಿ, ಉಳಿದ 27 ವಿಧಾನಸಭೆ ಕ್ಷೇತ್ರಗಳಿಗೆ ಬೆಂಗಳೂರು ಅಭಿವೃದ್ಧಿ ಸಚಿವರ ವಿವೇಚನಾ ಅನುದಾನದಲ್ಲಿ ₹265 ಕೋಟಿ ಬಿಡುಗಡೆ ಮಾಡಲಾಗಿದೆ.

ಉಪ ಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಅಕ್ಟೋಬರ್ 25ರಂದು ಪತ್ರ ಬರೆದು, 2024-25 ನೇ ಸಾಲಿನ ಆಯವ್ಯಯದಡಿ ಅನುದಾನ ಬಿಡುಗಡೆ ಮಾಡಲು ಸೂಚಿಸಿದ್ದಾರೆ.

ಆನೇಕಲ್ ವಿಧಾನಸಭೆ ಕ್ಷೇತ್ರಕ್ಕೆ ₹ 5 ಕೋಟಿ ಬಿಡುಗಡೆ ಮಾಡಲಾಗಿದೆ. ಉಳಿದ 26 ವಿಧಾನಸಭೆ ಕ್ಷೇತ್ರಗಳಿಗೆ ತಲಾ ₹10 ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಡಿಸಿಎಂ ಸೂಚಿಸಿದ್ದಾರೆ.

ಈ ಅನುದಾನದಲ್ಲಿ ಅತಿ ಅಗತ್ಯ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಬೇಕು. ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಕ್ರಿಯಾಯೋಜನೆ ರೂಪಿಸಿ ಕಾಮಗಾರಿ ನಡೆಸಲು ಶಿವಕುಮಾರ್ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.