ನವದೆಹಲಿ: ಕರ್ನಾಟಕದಲ್ಲಿನ ಮೂರು ರಾಷ್ಟ್ರೀಯ ಹೆದ್ದಾರಿಗಳ ಅಗಲೀಕರಣ ಕಾಮಗಾರಿ ಪೂರ್ಣಗೊಳಿಸಲು ₹ 832.30 ಕೋಟಿ ವೆಚ್ಚದ ಯೋಜನೆಗೆ ಕೇಂದ್ರದ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಅನುಮೋದನೆ ನೀಡಿದ್ದಾರೆ.

ಶಿವಮೊಗ್ಗ– ಮಂಗಳೂರು ವಿಭಾಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ–169ರಲ್ಲಿ ಮಾಳಾ ಗೇಟ್ನಿಂದ ಕಾರ್ಕಳದವರೆಗಿನ ದ್ವಿಪಥವನ್ನು ಚತುಷ್ಪಥವನ್ನಾಗಿ ವಿಸ್ತರಿಸಲು ₹ 177.94 ಕೋಟಿ ಅನುದಾನ ಒದಗಿಸಲಾಗುವುದು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

₹ 255.88 ಕೋಟಿ ವೆಚ್ಚದಲ್ಲಿ ಜೇವರ್ಗಿ– ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ– 150 ಎ ಮಾರ್ಗದ ಲಿಂಗಸ್ಗೂರಿನಿಂದ ಮುದಬಾಳ ಕ್ರಾಸ್ ಮತ್ತು ಮಸ್ಕಿ ನಗರದವರೆಗೆ ದ್ವಿಪಥವನ್ನು ಚತುಷ್ಪಥವನ್ನಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.

ಮಧುಗಿರಿ– ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ–69ರಲ್ಲಿ (ಗೌರಿಬಿದನೂರು ಬೈಪಾಸ್ ಹೊರತುಪಡಿಸಿ) ದ್ವಿಪಥದಿಂದ ಚತುಷ್ಪಥವನ್ನಾಗಿ ಮೇಲ್ದರ್ಜೆಗೆ ಏರಿಸುವುದಲ್ಲದೆ, ಬಾಕಿ ಕಾಮಗಾರಿ ಪೂರ್ಣಗೊಳಿಸಲು ₹ 398.48 ಕೋಟಿ ಅನುದಾನ ಮಂಜೂರಾತಿಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.