ಬೆಂಗಳೂರು: ಈ ಸಾಲಿನಲ್ಲಿ ಶಾಲೆಯಿಂದ ಹೊರಗೆ ಉಳಿದ ಮಕ್ಕಳನ್ನು ಗುರುತಿಸಿ, ಅವರನ್ನು ಮುಖ್ಯವಾಹಿನಿಗೆ ಕರೆತರುವ ಉದ್ದೇಶದಿಂದ ಮನೆ–ಮನೆ ಸಮೀಕ್ಷೆ ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶಿಸಿದೆ.

ಸಮೀಕ್ಷೆಗೆ ಸ್ವಸಹಾಯ ಗುಂಪುಗಳ ಸದಸ್ಯ ಮಹಿಳೆಯರನ್ನು ಗುರುತಿಸುವ ಕೆಲಸವನ್ನು ಶುಕ್ರವಾರವೇ (19ನೇ ಜುಲೈ) ನಡೆಸಬೇಕು. ಇದೇ 20–22ರ ಮಧ್ಯೆ ತಾಲ್ಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಜುಲೈ 31ರ ಒಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸಬೇಕು ಎಂದು ಪಂಚಾಯತ್ ರಾಜ್ ಆಯುಕ್ತಾಲಯವು ಸುತ್ತೋಲೆ ಹೊರಡಿಸಿದೆ.

ಸಮೀಕ್ಷೆ ನಡೆಸಲು ಆಯ್ಕೆಯಾದವರಿಗೆ ಸ್ಮಾರ್ಟ್ಫೋನ್ಗಳ ಮೂಲಕ ಸಮೀಕ್ಷೆಯ ದತ್ತಾಂಶಗಳನ್ನು ನಮೂದಿಸುವ ಬಗ್ಗೆ ತರಬೇತಿ ನೀಡಬೇಕು. ತರಬೇತಿಯಲ್ಲಿ ಸ್ಥಳೀಯ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಸಮೂಹ ಸಂಪನ್ಮೂಲ ವ್ಯಕ್ತಿಗಳನ್ನು ತೊಡಗಿಸಿಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.